Friday, April 26, 2024
Homeರಾಜ್ಯಮಹತ್ವದ ಮಾಹಿತಿ : ಸಾಮಾನ್ಯ ವರ್ಗದ ಹುದ್ದೆಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಲ್ಲ

ಮಹತ್ವದ ಮಾಹಿತಿ : ಸಾಮಾನ್ಯ ವರ್ಗದ ಹುದ್ದೆಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಲ್ಲ

ಬೆಂಗಳೂರು, ಅ.31- ಮೀಸಲಾತಿ ಕೋರಿ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದರೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯದ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೀಸಲಾತಿಯಿಂದ
ಯಾವುದೇ ರಿಯಾಯಿತಿ ಪಡೆಯದೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಆದರೆ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೇಲಿನಂತೆ ನಿರ್ದೇಶನ ನೀಡಿದ್ದಾರೆ.

ಅಂತಿಮ ಆಯ್ಕೆ ಪಟ್ಟಿಯಲ್ಲಿ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆಯಾಗುವುದನ್ನು ತಪ್ಪಿಸಲು ಸಿಂಧುತ್ವ ಕಡ್ಡಾಯಗೊಳಿಸದಂತೆ ಅವರು ಸೂಚಿಸಿದ್ದಾರೆ.

RELATED ARTICLES

Latest News