ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಬರ್ತಾರಾ ರಾಜೀನಾಮೆ ನೀಡಿದ ಅತೃಪ್ತರು..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.16- ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್-ಜೆಡಿಎಶ್ ಅತೃಪ್ತ ಶಾಸಕರು ಗುರುವಾರ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ವಿಧಾನಸಭೆಗೆ ಗೈರು ಆಗುವ ಸಾಧ್ಯತೆ ಇದೆ.

ಇದೇ 18ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಈ ವೇಳೆ ಮುಂಬೈ ಹೋಟೆಲ್‍ನಲ್ಲಿ ತಂಗಿರುವ ಕಾಂಗ್ರೆಸ್‍ನ ಅತೃಪ್ತ ಶಾಸಕರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಎಲ್ಲ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ, ವಿಶ್ವಾಸಮತ ಯಾಚನೆಯ ವೇಳೆ ಸದನಕ್ಕೆ ಆಗಮಿಸುವ ಯಾವುದೇ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಮಂಗಳವಾರ ಸುಪ್ರೀಂಕೋರ್ಟ್‍ನಲ್ಲೂ ವಿಚಾರಣೆ ನಡೆಯಲಿದೆ. ಇದಲ್ಲದೆ ಇನ್ನೂ ಮೂರ್ನಾಲ್ಕು ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಅತೃಪ್ತ ಶಾಸಕರ ಭೇಟಿಗೆ ಯಾವುದೇ ಹಿರಿಯ ನಾಯಕರಿಗೆ ಅವಕಾಶ ಕಲ್ಪಿಸಬಾರದು. ನಮ್ಮ ಜೀವಕ್ಕೆ ಸಂಚಕಾರವಿದ್ದು, ಈ ಸಂಬಂಧ ಪೊಲೀಸ್ ಇಲಾಖೆ ಅಗತ್ಯ ಭದ್ರತೆ ಒದಗಿಸಬೇಕು ಎಂದು ಮುಂಬೈ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin