ಡಿಜೆಹಳ್ಳಿಗೆ ಗಲಭೆ : ನಷ್ಟ ವಸೂಲಿಗೆ ಕ್ಲೇಮ್ ಕಮೀಷನರ್ ಆಗಿ ನಿವೃತ್ತ ನ್ಯಾ.ಕೆಂಪಣ್ಣ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.28-ನಗರದ ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಗಲಭೆ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ವಾಹನಗಳನ್ನು ಹಾನಿ ಮಾಡಿದವರಿಂದಲೇ ನಷ್ಟ ಭರಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ ಆಗಿ ಹೈಕೋರ್ಟ್ ನೇಮಿಸಿದೆ.

ವಾದ-ವಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಹೈಕೋರ್ಟ್ ಮುಖ್ಯಮಂತ್ರಿ ಅಭಯ್ ಶ್ರೀನಿವಾಸ್ ಒಕಾ ಹಾಗೂ ಅಶೋಕ್.ಎಸ್ ಕಿಣಗಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್‍ನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತು.

ಕ್ಲೇಮ್ ಕಮೀಷನರ್ ಆಗಿರುವ ಘಟನೆಯಲ್ಲಿ ಸಾರ್ವಜನಿಕರ ಆಸ್ತಿ, ವಾಹನಗಳು, ಎಷ್ಟು ಪ್ರಮಾಣದಲ್ಲಿ ಹಾನಿಯಾಗಿವೆ? ಇದರ ಮೌಲ್ಯ, ಒಟ್ಟು ನಷ್ಟದ ಅಂದಾಜು ಕುರಿತಂತೆ ತನಿಖೆ ನಡೆಸಲಿದೆ. ವಿಡಿಯೋ ಮೂಲಕ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುವುದು ಹಾಗೂ ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಬೇಕೆಂದು ಸೂಚನೆ ಕೊಟ್ಟಿತು.

ಕ್ಲೇಮ್ ಕಮೀಷನರ್‍ಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಸಿಬ್ಬಂದಿ, ವಾಹನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡಬೇಕೆಂದು ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.

ಡಿಜೆಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದ ಗಲಭೆ ವೇಳೆ ಕೆಲವು ದುಷ್ಕರ್ಮಿಗಳು ಸಾರ್ವಜನಿಕರಿಗೆ ಸೇರಿದ ವಾಹನಗಳಿಗೆ ಬೆಂಕಿಹಚ್ಚಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ್ದರು.

ಕಾರು, ದ್ವಿಚಕ್ರವಾಹನ, ಪೊಲೀಸ್ ಠಾಣೆಗೆ ಬೆಂಕಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ಒಡೆದು ಹಾಕಿದ್ದು, ಸರ್ಕಾರಿ ಮತ್ತು ಸಾರ್ವಜನಿಕರ ವಾಹನಗಳಿಗೂ ಬೆಂಕಿ ಹೆಚ್ಚಿದ್ದರು.

ಉತ್ತರಪ್ರದೇಶ ಸರ್ಕಾರ ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಿದ್ದರಿಂದಲೇ ವಸೂಲಿ ಮಾಡಲು ಕಾಯ್ದೆಯೊಂದನ್ನು ಜಾರಿಗೆ ತಂದಿತ್ತು. ಸುಪ್ರೀಂಕೋರ್ಟ್ ಅಲ್ಲಿನ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು.

ಇದೀಗ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಉಂಟಾದ ಗಲಭೆ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಂದಲೇ ನಷ್ಟ ಭರಿಸಲು ಮುಂದಾಗಿದೆ.

ಸರ್ಕಾರ ಕ್ಲೇಮ್ ಕಮೀಷನರ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಸರ್ಕಾರದ ಪರವಾಗಿ ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಅವರು ಕ್ಲೇಮ್ ಕಮೀಷನರ್ ನೇಮಕ ಮಾಡುವುದನ್ನು ಸಮರ್ಥಿಸಿಕೊಂಡಿದ್ದರು.

Facebook Comments

Sri Raghav

Admin