ಸರಗಳ್ಳನ ಸೆರೆ : 30 ಗ್ರಾಂ ಮಾಂಗಲ್ಯ ಸರ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.25- ಚಿನ್ನದ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಠಾಣೆ ಪೆÇಲೀಸರು ಯಶಸ್ವಿಯಾಗಿದ್ದು 1.50 ಲಕ್ಷ ಬೆಲೆಯ 30 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ.ಪ್ರದೀಪ್ ಬಂಧಿತ ಆರೋಪಿ.

ಜನವರಿ 23 ರಂದು ಸಂಜೆ 4 ಗಂಟೆ ಸಮಯದಲ್ಲಿ ಕಲಾಸಿಪಾಳ್ಯದ ಬಂಬೂಬಜಾರ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯದ ಸರವನ್ನು ಆರೋಪಿ ಕಿತ್ತು ಪರಾರಿಯಾಗಿದ್ದ.

ಈ ಸಂಬಂಧ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‍ಪೆಕ್ಟರ್ ಚಂದ್ರಕಾಂತ್ ಎಲ್.ಟಿ ಹಾಗೂ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಪ್ರದೀಪ್‍ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments