ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ, ಆಸ್ಪತ್ರೆಗೆ ದೌಡಾಯಿಸಿದ ಯಶ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Yash--01

ಬೆಂಗಳೂರು. ಜ. 08 : ರಾಕಿಂಗ್ ಸ್ಟಾರ್ ಯಶ್ ರನ್ನು ನೋಡಲು ಆಗಲಿಲ್ಲ ಎನ್ನುವ ಕಾರಣಕ್ಕೆ ಪೆಟ್ರೋಲ್ ತೆಗೆದುಕೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ಇಂದು ಯಶ್ ಹುಟ್ಟುಹಬ್ಬದ ಇರುವ ಕಾರಣ ರವಿ ಎನ್ನುವ ಅಭಿಮಾನಿ ಯಶ್ ಮನೆಗೆ ಬಳಿ ಬಂದಿದ್ದರು. ಆದರೆ, ಯಶ್ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳದೆ ಇರುವ ಕಾರಣ ಅವರನ್ನು ನೋಡಲು ಸಾಧ್ಯ ಆಗಲಿಲ್ಲ.

ಯಶ್ ರನ್ನು ನೋಡಲು ಆಗಲಿಲ್ಲ ಎನ್ನುವ ಕಾರಣಕ್ಕೆ ಪೆಟ್ರೋಲ್ ತೆಗೆದುಕೊಂಡು ಬಂದು ಯಶ್ ಮನೆ ಮುಂದೆಯೇ ಬೆಂಕಿ ಹಂಚಿಕೊಂಡು ರವಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಕೂಡಲೇ ಆ ಹುಡುಗನನ್ನು ವಿಕ್ಟೋರಿಯ ಆಸ್ಪತ್ರೆಗೆ ಸೇರಿಸಲಾಗಿದೆ.

ಆಸ್ಪತ್ರೆಗೆ ದೌಡಾಯಿಸಿದ ಯಶ್ :   ನಟ ಯಶ್ ನಿವಾಸದ ಮುಂದೆ ಅಭಿಮಾನಿಯೊಬ್ಬರು ಆತ್ಮಹತ್ಯೆ ಪ್ರಯತ್ನಿಸಿರುವ ವಿಷಯ ತಿಳಿಯುತ್ತಿದ್ದಂತೆ ನಟ ಯಶ್ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಅಭಿಮಾನಿಯೇ ಆರೋಗ್ಯ ವಿಚಾರಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ನಟ ಯಶ್, ‘ಘಟನೆ ನಡೆದಾಗ ನಾನು ಮನೆಯಲ್ಲಿ ಇರಲಿಲ್ಲ. ಹುಟ್ಟು ಹಬ್ಬ ಆಚರಣೆ ಮಾಡುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಸ್ವಲ್ಪ ಹೊತ್ತಿನ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದೆ’ ಎಂದರು.

‘ರವಿ ಅವರ ಶೇ 70ರಷ್ಟು ದೇಹ ಸುಟ್ಟು ಹೋಗಿದೆ. ನನಗೆ ವಿಚಾರ ತಿಳಿದು ಭಯವಾಯಿತು. ಸಿನಿಮಾ ನೋಡಿ ನಮ್ಮಿಂದ ಏನಾದರೂ ಒಳ್ಳೆಯದನ್ನು ಕಲಿತುಕೊಳ್ಳಿ. ಇಂತಹ ಘಟನೆಗಳನ್ನು ಮಾಡಿಕೊಳ್ಳಬೇಡಿ’ ಎಂದು ನಟ ಯಶ್ ಮನವಿ ಮಾಡಿದರು.

Facebook Comments