ಹಕ್ಕಿಜ್ವರದ ಹಿನ್ನೆಲೆಯಲ್ಲಿ ಮೈಸೂರಿನಿಂದ ಕೇರಳಕ್ಕೆ ಕೋಳಿ ಸಾಗಣೆ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜ.6- ಕೇರಳ ಮತ್ತಿತರೆಡೆ ಹಕ್ಕಿಜ್ವರ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಕೇರಳಕ್ಕೆ ಕೋಳಿ ಸಾಗಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿದ್ದಾರೆ. ಕೇರಳದಿಂದ ಮೈಸೂರಿಗೆ ಕೋಳಿ ಸೇರಿದಂತೆ ಯಾವುದೇ ಪಕ್ಷಿಗಳನ್ನು ಸಾಗಾಣಿಕೆ ಮಾಡಬಾರದೆಂದು ಸೂಚಿಸಿದ್ದಾರೆ.

ಮೈಸೂರು-ಹೆಚ್‍ಡಿ ಕೋಟೆ ರಸ್ತೆಯಲ್ಲಿರುವ ಬಾವಲಿ ಚೆಕ್‍ಪೋಸ್ಟ್‍ನಲ್ಲಿ ಸಂಪೂರ್ಣ ಭದ್ರತೆ ಮಾಡಲಾಗಿದ್ದು, ಕೇರಳದಿಂದ ಬರುವ ಪ್ರತಿ ವಾಹನವನ್ನೂ ಪರಿಶೀಲಿಸಿ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲ ವಾಹನಗಳನ್ನೂ ಸ್ಯಾನಿಟೈಜ್ ಮಾಡಿದ ನಂತರವೇ ನಗರದ ಒಳಗೆ ಬಿಡಲಾಗುತ್ತಿದೆ. ಕೋಳಿ, ನಾಟಿ ಕೋಳಿ, ವಲಸೆ ಹಕ್ಕಿಗಳು ಸೇರಿದಂತೆ ಯಾವುದೇ ಹಕ್ಕಿ ಕಂಡರೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಂದು ಮುಂಜಾನೆಯಿಂದಲೇ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಬಾವಲಿ ಚೆಕ್‍ಪೋಸ್ಟ್‍ನಲ್ಲಿ ಮೊಕ್ಕಾಂ ಹೂಡಿ ಪರಿಶೀಲಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಕೋಳಿ ಅಥವಾ ಯಾವುದೇ ಪಕ್ಷಿ ಮೃತಪಟ್ಟಿರುವುದು ಗೊತ್ತಾದರೆ ಜಿಲ್ಲಾಡಳಿತ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

Facebook Comments