ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ, ದಕ್ಷಿಣ ಆಫ್ರಿಕಾ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ..!

ಈ ಸುದ್ದಿಯನ್ನು ಶೇರ್ ಮಾಡಿ

ಸೌಥಾಂಪ್ಟನ್. ಜೂ.05 : ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಭಾರತ ಗೆಲುವಿನ ಅಭಿಯಾನ ಆರಂಭವಾಗಿದ್ದು, ಇಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ನಂತರ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತ ಉಪನಾಯಕ ರೋಹಿತ್ ಶರ್ಮಾ ಭರ್ಜರಿ ಶತಕದ ನೆರವಿನೊಂದಿಗೆ 4703 ನೇ ಓವರ್ ನಲ್ಲಿ 230 ರನ್ ಗಳಿಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಹುಮ್ಮಸ್ಸಿನಿಂದ ಟಾರ್ಗೆಟ್ ಬೆನ್ನತ್ತಿದ್ದ ಭಾರತ  ರಬಾಡ ಸ್ವಿಂಗ್​​ ದಾಳಿಗೆ ಶಿಖರ್ ಧವನ್(8) ಪೆವಿಲಿಯನ್ ಹಾದಿ ಹಿಡಿಯುವ ಮೂಲಕ ಮೊದಲ ವಿಕೆಟ್ ಕಳೆದುಕೊಂಡಿತು. ಈ ಸಂದರ್ಭ ರೋಹಿತ್ ಶರ್ಮಾ ಜೊತೆಯಾದ ನಾಯಕ ವಿರಾಟ್ ಕೊಹ್ಲಿ ಇನ್ನಿಂಗ್ಸ್​ ಕಟ್ಟಲು ಹೊರಾಟರಾದರು ಫೆಹ್ಲುಕ್ವೇವೊ ಮಾರಕವಾಗಿ ಪರಿಣಮಿಸಿದರು.ಈ ಮಧ್ಯೆ ಕೊಹ್ಲಿ 18 ರನ್ ಗಳಿಸಿರುವಾಗ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಹೀಗೆ ಎರಡು ಪ್ರಮುಖ ವಿಕೆಟ್ ಕಳೆದುಕೊಂಡ ಭಾರತಕ್ಕೆ ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಆಸರೆಯಾಗಿ ನಿಂತರು. ಎಚ್ಚರಿಕೆಯ ಆಟ ಪ್ರದರ್ಶಿಸಿದರು. ಚೆನ್ನಾಗಿಯೆ ಆಡುತ್ತಿದ್ದ ರಾಹುಲ್ ರಬಾಡ ಎಸೆದ ಸ್ಲೋ ಬಾಲ್​ಗೆ ಬಲಿಯಾಗ ಬೇಕಾಯಿತು. 26 ರನ್ ಗಳಿಸಿ ರಾಹುಲ್ ಔಟ್ ಆಗಿದ್ದು ತಂಡಕ್ಕೆ ಹೊಡೆತ ಬಿದ್ದಂತತಾಗಿದೆ.

ಆದರೆ ತನ್ನ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ರೋಹಿತ್ ಅವರು ಎಂ ಎಸ್ ಧೋನಿ ಜೊತೆಗೂಡಿ ಅತ್ಯುತ್ತಮ ಆಟವಾಡಿದರು. ಏಕದಿನ ಕ್ರಿಕೆಟ್​ನಲ್ಲಿ 23ನೇ ಶತಕ ಸಿಡಿಸಿದ ರೋಹಿತ್ ತಂಡಕ್ಕೆ ಗೆಲುವು ತಂದಿಟ್ಟರು. ಗೆಲುವಿಗೆ ಇನ್ನೇನು ಕೆಲವೇ ರನ್ ಬೇಕಿರುವಾಗ ಧೋನಿ(34) ಔಟ್ ಆದರಾದರು, ಕೊನೆಯಲ್ಲಿ ಹಾರ್ದಿಕ್ ಜೊತೆಗೂಡಿ ರೋಹಿತ್ ಗೆಲುವಿನ ದಡ ಸೇರಿಸಿದರು.

ಈ ಮೂಲಕ 47.3 ಓವರ್​ನಲ್ಲೇ 4 ವಿಕೆಟ್ ಕಳೆದುಕೊಂಡು ಭಾರತ 230 ರನ್ ಕಲೆಹಾಕಿ ಜಯ ಸಾಧಿಸಿದೆ. ರೋಹಿತ್ ಶರ್ಮಾ 144 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್ ಸೇರಿ ಅಜೇಯ 122 ರನ್ ಕಲೆಹಾಕಿದರು.

ಆಸ್ಟ್ರೇಲಿಯಾ ಪರ ಕಗಿಸೊ ರಬಾಡ 2 ವಿಕೆಟ್ ಪಡೆದರೆ , ಕ್ರಿಸ್ ಮೊರೀಸ್ ಹಾಗೂ ಫೆಹ್ಲುಕ್ವೇವೊ ತಲಾ 1 ವಿಕೆಟ್ ಪಡೆದರು. 6 ವಿಕೆಟ್​ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ವಿಶ್ವಕಪ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ.  ಶತಕ ಸಿಡಿಸಿ ಮಿಂಚಿದ ರೋಹಿತ್ ಪಂದ್ಯಶ್ರೇಷ್ಠ ಪ್ರಸಸ್ತಿ ಬಾಜಿಕೊಂಡರು. ಭಾರತ ತನ್ನ ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಜೂನ್ 9 ರಂದು ಆಡಲಿದೆ.

# ರೋಹಿತ್ ಶತಕ ಸಂಭ್ರಮ :
ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಸೌತ್‌ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ 23ನೇ ಸೆಂಚುರಿ ಸಿಡಿಸಿ ದಾಖಲೆ ಬರೆದರು. ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾಗಿದು 2ನೇ ಶತಕ. 128 ಎಸೆತದಲ್ಲಿ ರೋಹಿತ್ ಶರ್ಮಾ ಸೆಂಚುರಿ ಪೂರೈಸಿದರು. ರೋಹಿತ್ ಶತಕದಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಸಂಕ್ಷಿಪ್ತ ಸ್ಕೋರ್ :
ದಕ್ಷಿಣ ಆಫ್ರಿಕಾ : 227/9
ಭಾರತ : 230/4 (47.3/50 ov, target 228)

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin