ಬೆಂಗಳೂರಿನಲ್ಲಿ ರೋಹಿತ್‍ಶರ್ಮಾ ಫಿಟ್ನೆಸ್ ತರಬೇತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.20- ಐದು ಬಾರಿ ಐಪಿಎಲ್ ಚಾಂಪಿಯನ್ ಎಂಬ ಖ್ಯಾತಿ ಹೊಂದಿರುವ ಮುಂಬೈ ಇಂಡಿಯನ್ಸ್‍ನ ನಾಯಕ, ಟೀಂ ಇಂಡಿಯಾದ ಉಪನಾಯಕ ರೋಹಿತ್‍ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‍ಸಿಎ)ಯಲ್ಲಿ ನಡೆಯುತ್ತಿರುವ ಫಿಟ್ನೆಸ್ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ. ಐಪಿಎಲ್ 13ರ ವೇಳೆಯೇ ಗಾಯಗೊಂಡಿದ್ದ ರೋಹಿತ್ ಶರ್ಮಾರನ್ನು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ,

ಟ್ವೆಂಟಿ-20 ಹಾಗೂ ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಿರ ಲಿಲ್ಲ ಈ ನಡುವೆಯೂ ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್‍ನ ಸಾರಥ್ಯ ವಹಿಸಿದ್ದ ರೋಹಿತ್ ಶರ್ಮಾ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ (68 ರನ್)ಗಳಿಸುವ ಮೂಲಕ ತಂಡವನ್ನು ಚಾಂಪಿಯನ್ಸ್ ಆಗಿಸಿ ದ್ದರು.

ಈ ನಡುವೆ ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ, ರೋಹಿತ್ ಶರ್ಮಾರನ್ನು ತಂಡಕ್ಕೆ ಮರು ಆಯ್ಕೆ ಮಾಡಿಕೊಂಡರು. ಆದರೆ ಬಿಸಿಸಿಐ ನಿಯಮಾವಳಿಗಳ ಪ್ರಕಾರ ಒಬ್ಬ ಆಟಗಾರ ಗಾಯಗೊಂಡರೆ ಆತನ ಫಿಟ್ನೆಸ್ ಪರೀಕ್ಷೆಯ ನಂತರ ತಂಡದಲ್ಲಿ ಸ್ಥಾನ ನೀಡುವ ಪರಿಪಾಠವಿರುವುದರಿಂದ ರೋಹಿತ್ ಶರ್ಮಾ ಬೆಂಗಳೂರಿನಲ್ಲಿ ಫಿಟ್ನೆಸ್ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಕೂಡ ಇಲ್ಲೇ ಫಿಟ್ನೆಸ್ ತರಬೇತಿ ಪಡೆಯುತ್ತಿದ್ದು ಈ ಇಬ್ಬರು ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ರೋಹಿತ್ ಶರ್ಮಾ ಹಾಗೂ ಇಶಾಂತ್‍ಶರ್ಮಾ ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆದ ನಂತರ ಒಟ್ಟಿಗೆ ಆಸ್ಟ್ರೇಲಿಯಾ ಪ್ರಯಾಣ ಮಾಡಲಿದ್ದಾರೆ.ಡಿಸೆಂಬರ್ 17ರಿಂದ ಆರಂಭಗೊಳ್ಳುವ ಬಾರ್ಡರ್- ಗವಾಸ್ಕರ್ ಮೊದಲ ಟೆಸ್ಟ್‍ನ ನಂತರ ನಾಯಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು ಉಳಿದ ಪಂದ್ಯಗಳಲ್ಲಿ ರೋಹಿತ್ ಶರ್ಮಾ ತಂಡದ ಸಾರಥ್ಯ ವಹಿಸುವ ಸೂಚನೆಗಳಿವೆ.

Facebook Comments