ರೋಷನ್ ಬೇಗ್ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.26- ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯ ಹದಗೆಟ್ಟಿದ್ದು, ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೋಷನ್‍ಬೇಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲು ಆದೇಶ ನೀಡಿತ್ತು.

ಸಿಬಿಐ ಅಕಾರಿಗಳು ಜೈಲಿನ ಬಳಿ ಬಂದಿದ್ದರು. ಆದರೆ, ಆ ವೇಳೆಗಾಗಲೇ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸಿಬಿಐ ಬಂಸುವ ಎರಡು ದಿನ ಮೊದಲು ರೋಷನ್ ಬೇಗ್ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ಸಿಬಿಐ ಬಂಧನದ ಬಳಿಕ ಒತ್ತಡಕ್ಕೆ ಒಳಗಾದ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ರಕ್ತದೊತ್ತಡ ಹಾಗೂ ಮಧುಮೇಹದ ಸಮಸ್ಯೆ ಏರುಪೇರಾಗಿತ್ತು. ಆರೋಗ್ಯ ಹದಗೆಟ್ಟಿದ್ದರಿಂದ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಅವರಿಗೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಮಾಹಿತಿಯನ್ನು ತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

Facebook Comments