ಬೆಳ್ಳಂಬೆಳಿಗ್ಗೆ ರೌಡಿಗಳಿಗೆ ಪೊಲೀಸರಿಂದ ಕ್ಲಾಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.9- ಪಶ್ಚಿಮ ವಿಭಾಗದ ಪೊಲೀಸರು ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಪಶ್ಚಿಮ ವಿಭಾಗದ ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ರೌಡಿಗಳ ಮನೆಗಳ ಮೇಲೆ ಪೊಲೀಸರು ಇಂದು ಬೆಳಗ್ಗೆ 6 ರಿಂದ 9 ಗಂಟೆವರೆಗೆ ದಾಳಿ ಮಾಡಿ ರೌಡಿಗಳನ್ನು ಠಾಣೆಗೆ ಕರೆತಂದು ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ತಾಕೀತು ಮಾಡಿದರು.

ರೌಡಿಗಳು ಪ್ರಸ್ತುತ ಮಾಡುತ್ತಿರುವ ಕೆಲಸ, ವಾಸಸ್ಥಳದ ವಿಳಾಸ, ಖಾಯಂ ವಿಳಾಸ, ಮೊಬೈಲ್ ನಂಬರ್‍ಅನ್ನು ಪೊಲೀಸರು ಪಡೆದುಕೊಂಡರು. ಗೌರಿ-ಗಣೇಶ ಹಬ್ಬದ ನಿಮಿತ್ತ ರೌಡಿಗಳ ಪರೇಡ್ ನಡೆಸಲಾಯಿತು ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ಈ ಸಂಜೆಗೆ ತಿಳಿಸಿದ್ದಾರೆ.

Facebook Comments