ಬೆಂಗಳೂರಲ್ಲಿ ರೌಡಿಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.22- ರೌಡಿ ಬಬ್ಲಿ ಕೊಲೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಆಡುಗೋಡಿ ಠಾಣೆ ಪೊಲೀಸರು ಆರು ರೌಡಿಗಳು ಮತ್ತು ನಾಲ್ವರು ರೌಡಿ ಸಹಚರರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಈ ರೌಡಿಗಳು ಅಕ್ರಮ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರಿಂದ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.

ರೌಡಿಗಳು ಕೊಲೆ, ಕೊಲೆ ಯತ್ನ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇತ್ತೀಚೆಗೆ ತಮ್ಮ ಚಟುವಟಿಕೆಗಳನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ. ರೌಡಿ ಬಬ್ಲಿ ಕೊಲೆ ಮಾಡಿ ಪರಾರಿಯಾಗಿರುವ ಉಳಿದ ಆರೋಪಿಗಳಿಗಾಗಿ ಕೋರಮಂಗಲ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಕೊಲೆ ಆರೋಪಿಗಳಾದ ರವಿ ಮತ್ತು ಪ್ರದೀಪ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್‍ಗೆ ನುಗ್ಗಿ ಬಬ್ಲಿಯನ್ನು ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಮಚ್ಚು ಮತ್ತು ಲಾಂಗ್‍ಗಳನ್ನು ಎತ್ತಿ ಹಿಡಿದುಕೊಂಡು ಸಂಭ್ರಮಿಸಿ ಪರಾರಿಯಾಗಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

Facebook Comments