ರೌಡಿ ಹರೀಶ್ ಗ್ಯಾಂಗ್ ಸೆರೆ : ರಿವಾಲ್ವರ್, ಜೀವಂತ ಗುಂಡುಗಳು ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ. 26- ದಾರಿ ಹೋಕರನ್ನು ಅಡ್ಡಗಟ್ಟಿ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಹಾಗೂ ಆತನ ಮೂವರು ಸಹಚರರನ್ನು ಬಂಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ ಒಂದು ರಿವಾಲ್ವರ್ ಮತ್ತು 6 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಕುಖ್ಯಾತ ರೌಡಿ ಶೀಟರ್ ಹರೀಶ್ ಹಾಗೂ ಆತನ ಮೂವರು ಸಹಚರರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿನಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಉಪನಗರದ ವಿಶ್ವೇಶ್ವರ ಲೇಔಟ್‍ನ ಕುವೆಂಪು ಸರ್ಕಾರಿ ಶಾಲೆ ಕಾಂಪೌಂಡ್ ಬಳಿ ಸಾರ್ವಜನಿಕರ ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಸಿದ್ದಾರೆ.

ಆರೋಪಿಗಳಿಂದ ಒಂದು ರಿವಾಲ್ವರ್, 6 ಜೀವಂತ ಗುಂಡು ಮತ್ತಿತರ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಅವರನ್ನು ಜ್ಞಾನಭಾರತಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ದಸ್ತಗಿರಿ ಆಗಿರುವ ಕುಖ್ಯಾತ ರೌಡಿಶೀಟರ್ ಹರೀಶ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಸಿಸಿಬಿ, ಸಂಘಟಿತ ಅಪರಾಧ ದಳದ ಅಕಾರಿ ಮತ್ತು ಸಿಬ್ಬಂದಿಗಳು ಈ ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments