ರೌಡಿ ಆನಂದ್ ಕೊಲೆ : ಆರೋಪಿಗಳ ಬಂಧನಕ್ಕೆ ಎರಡು ತಂಡ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.25- ರೌಡಿ ಆನಂದ್ ಅಲಿಯಾಸ್ ಶಿವಪುರ ಆನಂದ್ (36)ನನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.

ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದ ಆನಂದ್ ಕಳೆದ ಮೂರು ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದನು. ರಾತ್ರಿ 8 ಗಂಟೆ ಸುಮಾರಿಗೆ ನೆಲಗದರನಹಳ್ಳಿಯ ಶಿವಪುರದಲ್ಲಿನ ತನ್ನ ಮನೆ ಬಳಿ ಆನಂದ್ ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದನು. ಇದೇ ಸಮಯ ಕಾದಿದ್ದ ನಾಲ್ಕೈದು ಮಂದಿ ದುಷ್ಕರ್ಮಿಗಳು ಬೈಕ್‍ಗಳಲ್ಲಿ ಬಂದು ಏಕಾಏಕಿ ಆನಂದ್ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹಳೆ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಆನಂದ್ ಏರಿಯಾದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಾನೆಂಬ ದುರುದ್ದೇಶದಿಂದ ಎದುರಾಳಿ ಗುಂಪು ಈ ಕೊಲೆ ನಡೆಸಿರಬಹುದೆಂದು ಅನುಮಾನ ವ್ಯಕ್ತವಾಗಿದೆ.
ಪೊಲೀಸರು ಈಗಾಗಲೇ ಘಟನಾ ಸುತ್ತಮುತ್ತಲಿನ ಸಿಸಿ ಟಿವಿ ಪುಟೇಜ್‍ಗಳನ್ನು ಪಡೆದು ಆರೋಪಿಗಳ ಪತ್ತೆ ಕಾರ್ಯ ಕೈಗೊಂಡಿದ್ದಾರೆ.

Facebook Comments