ಆರ್.ಆರ್.ನಗರದಲ್ಲಿ ನ.6ರಿಂದ ರ‍್ಯಾಂಡಮ್ ಕೊರೊನಾ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.4- ಉಪ ಚುನಾವಣೆ ನಡೆದ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ನ.6ರಿಂದ ಎರಡು ಹಂತದಲ್ಲಿ ರ್ಯಾಂಡಮ್ ಕೊರೊನಾ ಪರೀಕ್ಷೆ ನಡೆಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ. ನ.6ರಿಂದ 9ರವರೆಗೆ ಹಾಗೂ ನ.11ರಿಂದ 14ರವರೆಗೆ ಇಡೀ ಪ್ರದೇಶದಲ್ಲಿ ಕೊರೊನಾ ತಪಾಸಣೆ ನಡೆಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಲಾಗಿತ್ತು. ಮತದಾರರ ಬಲಗೈಗೆ ಕೈಗವಸು ವಿತರಿಸುವ ಮೂಲಕ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ , ಚುನಾವಣೆ ಸಂದರ್ಭದಲ್ಲಿ ಮೂರು ರಾಜಕೀಯ ಪಕ್ಷಗಳ ಮುಖಂಡರು ಮನೆ ಮನೆಗಳಿಗೆ ತೆರಳಿ ಪ್ರಚಾರ ಮಾಡಿರುವುದರಿಂದ ಹಾಗೂ ಬಹಿರಂಗ ಸಭೆ ನಡೆಸಿದ ಸಂದರ್ಭ ದಲ್ಲಿ ಸಮರ್ಪಕವಾಗಿ ಮಾಸ್ಕ್ ಧರಿಸದಿರುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯ ವಾಗದ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಡೀ ಕ್ಷೇತ್ರ ದಲ್ಲಿ ರ್ಯಾಂಡಂ ಕೊರೊನಾ ಪರೀಕ್ಷೆ ನಡೆಸಲಾಗುವುದು ಎಂದರು.

ಎರಡು ಹಂತದಲ್ಲಿ ರ್ಯಾಂಡಮ್ ಪರೀಕ್ಷೆ ನಡೆಸಲು ಬಿಬಿಎಂಪಿ ಸಕಲ ಸಿದ್ಧತೆ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ. ನ.6ರಿಂದ ಸಿಬ್ಬಂದಿಗಳು ಮೊದಲ ಹಂತದ ತಪಾಸಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಿದ್ದಾರೆ. ನಂತರ 9ರಿಂದ ಎರಡನೆ ಹಂತದ ತಪಾಸಣಾ ಕಾರ್ಯ ಕೈಗೊಳ್ಳುವ ಮೂಲಕ ಇಡೀ ಕ್ಷೇತ್ರದಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಮಂಜುನಾಥ ಪ್ರಸಾದ್ ತಿಳಿಸಿದರು.

ತಪಾಸಣೆ ಸಂದರ್ಭದಲ್ಲಿ ಸೋಂಕಿನ ಗುಣ ಲಕ್ಷಣ ಕಂಡು ಬರುವ ವ್ಯಕ್ತಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸುವುದು ಅವ ರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಹೋಂ ಐಸೊಲೇಷನ್‍ಗೆ ಒಳಪಡಿಸುವ ಮೂಲಕ ಸೋಂಕು ಉಲ್ಬಣ ತಡೆಗಟ್ಟಲು ಕ್ರಮ ಕೈಗೊಳ್ಳ ಲಾಗುವುದು ಎಂದು ಅವರು ವಿವರಿಸಿದರು.

Facebook Comments