10ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಡಾ.ಬಾಬುರಾವ್ ಇನ್ನಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಮೇ 12- 10 ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಬಡರೋಗಿಗಳ ಆಶಾಕಿರಣ ಡಾ.ಬಾಬುರಾವ್ ಇನ್ನಿಲ್ಲ. ಎಂತಹ ಸಂದರ್ಭದಲ್ಲೂ ಬಡರೋಗಿಗಳಿಗೆ ಕೇವಲ 10 ರೂ.ಗಳಲ್ಲಿ ಚಿಕಿತ್ಸೆ ನೀಡುತ್ತಿದ್ದ ಇವರು, ವೈದ್ಯ ವೃತ್ತಿಯನ್ನು ದೈವ ವೃತ್ತಿಯಂತೆ ಮಾಡುತ್ತಿದ್ದ ಇವರು ನಿನ್ನೆ ಕೊನೆಯುಸಿರೆಳೆದಿದ್ದಾರೆ.

ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ವೈದ್ಯ ವೃತ್ತಿಯನ್ನು ಆರಂಭಿಸಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದರು. ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದ ಮೂಲೆ ಮೂಲೆಯಿಂದ ಇವರ ಹತ್ತಿರ ಚಿಕಿತ್ಸೆ ಪಡೆಯಲು ಜನ ಆಗಮಿಸುತ್ತಿದ್ದರು.

1975ರಲ್ಲಿ ಶ್ರೀರಾಮನಗರಕ್ಕೆ ಆಗಮಿಸಿದ ಬಾಬುರಾವ್ ಅವರು ಅಂದಿನಿಂದ ಕೇವಲ 10 ರೂಪಾಯಿ ಮಾತ್ರ ಪಡೆದು ಚಿಕಿತ್ಸೆ ನೀಡುತ್ತಿದ್ದರು. ಹುಬ್ಬಳ್ಳಿ ಧಾರವಾಡ, ರಾಯಚೂರಿನಿಂದ ಬಂದು ಇಲ್ಲಿ ಚಿಕಿತ್ಸೆ ಪಡೆದುಕೊಂಡು ಹೋಗಿದ್ದರು.

ಇದೀಗ ಬಾಬುರಾವ್ ಅವರ ಅಕಾಲಿಕ ಅಗಲಿಕೆಯಿಂದ ಇಡೀ ಶ್ರೀರಾಮನಗರವೇ ಕಂಬನಿ ಮಿಡಿಯುತ್ತಿದೆ. ಇಂದು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಾಬುರಾವ್ ಅವರ ಅಂತಿಮ ಯಾತ್ರೆಯಲ್ಲಿ ಸ್ಥಳೀಯರು ಪಾಲ್ಗೊಂಡರು.

Facebook Comments