ಗಮನಿಸಿ : ಮಹತ್ವದ ಆದೇಶ ಹೊರಡಿಸಿದ ಸಾರಿಗೆ ಇಲಾಖೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.9-ರಾಜ್ಯ ಸರ್ಕಾರವು ರಾಜ್ಯದಲ್ಲಿ ವ್ಯಾಪಾರ ಸರಳೀಕರಣ ಮತ್ತು ವ್ಯವಹಾರ ಸ್ನೇಹಿ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ವಾಹನಗಳ ಮಾಲೀಕತ್ವ ವರ್ಗಾವಣೆ, ಸರಕು ಸಾಗಾಣೆ ರಹದಾರಿ, ವಾಹನಗಳ ಅರ್ಹತಾ ಪ್ರಮಾಣ ಪತ್ರ ಸೇವೆಗಳ ಅನುಷ್ಠಾನಕ್ಕೆ ಆನ್‍ಲೈನ್ ವಿಧಾನ ಬಳಸಲು ಸೂಚಿಸಿದೆ.

ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಅಸೂಚಿತ ಸಕಾಲ ಸೇವೆಗಳಾಗಿರುವುದರಿಂದ ಈ ಸೇವೆಗಳ ಅನುಷ್ಟಾನಕ್ಕೆ ಯಾವುದೇ ಭೌತಿಕ ಸಂಪರ್ಕವಿಲ್ಲದೆ ಕಡ್ಡಾಯವಾಗಿ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಸ್ವೀಕರಿಸಲು ಸಾರಿಗೆ ಇಲಾಖೆ ಆದೇಶಿಸಿದೆ.

ಸ್ವೀಕೃತ ಅರ್ಜಿಗಳನ್ನು ಆನ್‍ಲೈನ್ ಮೂಲಕವೇ ಕಾರ್ಯಗತಗೊಳಿಸುವುದು ಮತ್ತು ಸೇವಾ ಸಿಂಧು ಪೋರ್ಟಲ್‍ನಲ್ಲಿ ಸಂಯೋಜಿಸಬೇಕು. ಸಕಾಲ ಸೇವೆಗಳನ್ನು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸುವಂತೆ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ವ್ಯಾಪಾರ ಸರಳೀಕರಣ, ಸುಧಾರಣೆ ಅಂಶಗಳ ಅನುಷ್ಠಾನ ಸಂಬಂಧವಾಗಿ ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಿ ಕಾರ್ಯಗತಗೊಳಿಸುವುದರ ಬಗ್ಗೆ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

Facebook Comments

Sri Raghav

Admin