ವಿವಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜ.8ರಂದು ಗ್ರಾಮೀಣಾ ಕರ್ನಾಟಕ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.13- ಕೃಷಿ ಕಾರ್ಮಿಕರನ್ನು ಸಾಲದಿಂದ ಸಂಪೂರ್ಣ ಮುಕ್ತಗೊಳಿಸುವ ಋಣಮುಕ್ತ ಕಾಯ್ದೆಗಾಗಿ ಡಾ.ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಜ .8 ರಂದು ಗ್ರಾಮೀಣಾ ಕರ್ನಾಟಕ ಬಂದ್‍ಗೆ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆಕೊಟ್ಟಿದೆ.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖ್ಯಸ್ಥ ಜಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ಆಳುವ ಸರ್ಕಾರಗಳ ನಿರಂತರ ರೈತ ವಿರೋಧಿ ನೀತಿಗಳಿಂದ ಉಂಟಾಗಿರುವ ಕೃಷಿ ಬಿಕ್ಕಟ್ಟಿನಿಂದ ಅಸಂಖ್ಯಾತ ರೈತರ ಮತ್ತು ಕೃಷಿ ಕೂಲಿಕಾರರ ಅತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. ಇದನ್ನು ತಡೆಯಲು ಕೂಡಲೇ ಡಾ.ಎಂ ಎಸ್ ಸ್ವಾಮಿನಾಥನ್ ವರದಿಯನ್ವಯ ಸಂಸತ್‍ನಲ್ಲಿ ಮಂಡಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ, ಋಣಮುಕ್ತ ಕಾಯ್ದೆ ಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿಲಾಗುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಪ್ರವಾಹದಿಂದ ಬೀದಿಪಾಲಾಗಿರುವ ಅಸಂಖ್ಯಾತ ರೈತರು, ಕೃಷಿ ಕೂಲಿಕಾರ್ಮಿಕರು,ಇತರೆ ಕಸುಬುದಾದರರಿಗೆ ಕೂಡಡಲೇ ನ್ಯಾಯಯುತ ಪರಿಹಾರ ನೀಡಬೇಕು, ರೈತ ವಿರೋಧಿ ರಾಜ್ಯ ಭೂಸುಧಾರಣಾ ಕಾಯ್ದೆಯ ತಿದ್ದುಪಡಿ ಕೈ ಬಿಡಬೇಕು, ಉದ್ಯೋಗ ಖಾತರಿ ಯೋಜನೆ ಸಮರ್ಪಕ ಜಾರಿ ಸೇರಿದಂತೆ 21 ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಗುವುದು ಎಂದು ತಿಳಿಸಿದರು.

ಡಿ. 24ರಿಂದ ಜ.3ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ರೈತರ ಸಮಾವೇಶ ಮೆರವಣಿಗೆಗಳ ಮೂಲಕ ಮನವಿ ಸಲ್ಲಿಸಲಾಗುವುದಾಗಿ ತಿಳಿಸಿದರು. ಈ ಹೋರಾಟದಲ್ಲಿ ರೈತರು ಕೃಷಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

Facebook Comments