ರಷ್ಯಾ ಪ್ರಧಾನಿಗೂ ತಗುಲಿದ ಕೊರೊನಾ ಸೋಂಕು..!

ಈ ಸುದ್ದಿಯನ್ನು ಶೇರ್ ಮಾಡಿ

ಮಾಸ್ಕೋ, ಮೇ 1-ಡೆಡ್ಲಿ ಕೊರೊನಾ ದುಷ್ಪರಿಣಾಮದಿಂದ ಅತಿಗಣ್ಯ ವ್ಯಕ್ತಿಗಳೂ ಪಾರಾಗಿಲ್ಲ. ಈಗ ಈ ಸಾಲಿಗೆ ಮತ್ತೊಂದು ಸೇರ್ಪಡೆ ರಷ್ಯಾ ಪ್ರಧಾನಮಂತ್ರಿ ಮಿಖಾಯಿಲ್ ಮಿಶುಸ್ಟಿನ್.

ರಷ್ಯಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೆ ಕೋವಿಡ್-19 ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಅವರೇ ಮಾಹಿತಿ ನೀಡಿದ್ದಾರೆ. ನನಗೆ ಕೊರೊನಾ ವೈರಾಣು ಸೋಂಕು ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಸೆಲ್ಫ್ ಕ್ವಾರಂಟೈನ್ (ಸ್ವಯಂ ದಿಗ್ಬಂಧನ) ವ್ಯವಸ್ಥೆಯಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನನಗೆ ಸೋಂಕು ತಗುಲಿರುವ ಕಾರಣ ಸಂಪುಟ ಸಹೋದ್ಯೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ನಾವು ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ರಷ್ಯಾ ಪ್ರಧಾನಿ ಹೇಳಿದ್ದಾರೆ.

ತಮಗೆ ತಗುಲಿರುವ ಕೊರೊನಾ ಸೋಂಕು ಮತ್ತು ಆರೋಗ್ಯ ಸ್ಥಿತಿ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಿಖಾಯಿಲ್ ಚರ್ಚೆ ನಡೆಸಿದ್ದಾರೆ. ಶೀಘ್ರ ಚೇತರಿಕೆಗೆ

# ಮೋದಿ ಹಾರೈಕೆ :
ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಷ್ಯಾ ಪ್ರಧಾನಿ ಮಿಖಾಯಿಲ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಹಾರೈಸಿದ್ದಾರೆ.

ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆದಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮೊನ್ನೆಯಷ್ಟೇ ಕರ್ತವ್ಯಕ್ಕೆ ಹಿಂದಿರುಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Facebook Comments

Sri Raghav

Admin