ಹೆಚ್.ವಿಶ್ವನಾಥ್ ಅವರಿಗೆ ಪ್ರಚಾರದ ಹುಚ್ಚು : ದೇಶಪಾಂಡೆ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ, ಮೇ 19- ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಏನು ಹೇಳುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ.

ದಿನಕ್ಕೊಂದು ಹೇಳಿಕೆ ನೀಡಿದರೆ ಏನು ಅರ್ಥ ಬರುತ್ತದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಬೇಕಾದರೆ ಮತ್ತು ಸುಲಲಿತವಾಗಿ ನಡೆಯಬೇಕಾದರೆ ಪರಸ್ಪರ ವಿಶ್ವಾಸದಿಂದ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕೆಲವರು ಮಾಧ್ಯಮಗಳನ್ನು ಬಳಸಿಕೊಂಡು ಹೇಳಿಕೆಗಳನ್ನು ನೀಡುವುದನ್ನು ನೋಡಿದರೆ ಅವರಿಗೆ ಪ್ರಚಾರದ ಹುಚ್ಚು ಎಂದು ಹೇಳಬೇಕು ಎಂದು ಕಿಡಿಕಾರಿದ್ದಾರೆ.  ಉಪ ಚುನಾವಣೆ ಸಂದರ್ಭದಲ್ಲಿಯೇ ಉಭಯ ಪಕ್ಷಗಳ ನಾಯಕರು ಗೊಂದಲಮಯ ಹೇಳಿಕೆ ನೀಡಿ ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದು , ಬೇಸರದ ಸಂಗತಿ.

ಮುಂದೆ ಇದನ್ನು ತಿದ್ದಿಕೊಂಡು ಮುನ್ನಡೆಯಬೇಕಾದ ಅವಶ್ಯಕತೆ ಇದೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಅವರ ಬಗ್ಗೆ ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕು ಎಂದು ವಿಶ್ವನಾಥ್ ಅವರಿಗೆ ದೇಶಪಾಂಡೆ ತಿರುಗೇಟು ನೀಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin