ಜಿಂದಾಲ್ ಕಂಪನಿಗೆ ಭೂಮಿ ನೀಡಿದ್ದು ಬಿಜೆಪಿ ಸರ್ಕಾರ : ದೇಶಪಾಂಡೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ, ಜೂ.15- ಜಿಂದಾಲ್ ಕಂಪನಿಗೆ ಭೂಮಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಈಗ ವಿರೋಧ ಪಕ್ಷದ ನಾಯಕರು ಅವರದೇ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿ ಸಾವಿರಾರು ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಿ ಉದ್ಯಮ ಆರಂಭಿಸಿದೆ.
ಅವರಿಗೆ ಭೂಮಿ, ಕೆಲವು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ.

ಈ ಹಿಂದೆ ಯಡಿಯೂರಪ್ಪ ಅವರೇ ಜಿಂದಾಲ್ ಕಂಪನಿಗೆ ಭೂಮಿ ನೀಡಿದ್ದರು. ಆಗಿನ ಕಾಲಕ್ಕೆ ದರವನ್ನೂ ಅವರೇ ನಿಗದಿ ಮಾಡಿದ್ದರು. ಕಾಲಾನಂತರ ದರ ಏರಿಕೆಯಾಗಿದೆ. ಇದಕ್ಕೆ ಯಾರೇನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಆಗಿನ ಕಾಲಕ್ಕೆ ದರ ಕಡಿಮೆಯಿತ್ತು, ಈಗ ಜಾಸ್ತಿಯಾಗಿದೆ. ಸರಿಯಾಗಿ ವಿಷಯಗಳನ್ನು ತಿಳಿದುಕೊಂಡು ರಾಜಕಾರಣ ಮಾಡಬೇಕು. ನನಗೆ ವಿರೋಧ ಪಕ್ಷದ ನಾಯಕರ ಬಗ್ಗೆ ಗೌರವ ಇದೆ.

ಆದರೆ ಅವರು ಜನರಿಗೆ ತಪ್ಪು ಮಾಹಿತಿ ನೀಡಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದ ಅವರು, ಯಾವ ಕಾರಣಕ್ಕಾಗಿ ಅವರು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ