ರಾಹುಲ್‍ಗಾಂಧಿ ಅವರಿಗೆ ಸಿದ್ದರಾಮಯ್ಯ ಅವರು ದೂರು ಕೊಟ್ಟಿಲ್ಲ : ದೇಶಪಾಂಡೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ.20- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‍ಗಾಂಧಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ದೂರು ನೀಡಿದ್ದಾರೆಂಬುದು ಸುಳ್ಳು ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಬರ ಪರಿಶೀಲನೆಗೆ ನಗರಕ್ಕೆ ಆಗಮಿಸಿದ್ದ ಸಚಿವರು ಮೊದಲು ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿದರ್ಶನ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ದೆಹಲಿಗೆ ಹೋಗಿದ್ದುದು ರಾಹುಲ್‍ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಲು ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ವಿಷಯದ ಬಗ್ಗೆ ಮಾತನಾಡಿಲ್ಲ. ಇಲ್ಲಸಲ್ಲದ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಹೇಳಿದರು.

ಕೆಪಿಸಿಸಿ ವಿಸರ್ಜನೆ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಈ ಕುರಿತು ಎಐಸಿಸಿ ಕ್ರಮವನ್ನು ಸ್ವಾಗತಿಸುತ್ತೇನೆ. ಆದರೆ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.  ಹೈಕಮಾಂಡ್ ನನಗೆ ಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದೆ. ಅದರಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ಎಐಸಿಸಿ ಒಳ್ಳೆ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಇದರಿಂದ ಒಳಿತಾಗಲಿದೆ ಎಂದು ದೇಶಪಾಂಡೆ ತಿಳಿಸಿದರು.

ಚಾಮುಂಡಿಬೆಟ್ಟಕ್ಕೆ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂಲಭೂತ ಸೌಕರ್ಯಗಳನ್ನು ಇನ್ನೂ ಹೆಚ್ಚು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದರು. ಮೂಲ ಮತ್ತು ವಲಸಿಗ ಕಾಂಗ್ರೆಸಿಗರ ಬಗ್ಗೆ ಕೇಳಿದ ಪ್ರಶ್ನೆಗೆ ದೇಶಪಾಂಡೆ ಏನನ್ನೂ ಉತ್ತರಿಸದೆ ತೆರಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ