‘ನೈತಿಕತೆ ಇದ್ದಾರೆ ಹೀನಾಯ ಸೋಲಿನ ಹೊಣೆ ಹೊತ್ತು ಗುಂಡೂರಾವ್ ರಾಜೀನಾಮೆ ನೀಡಲಿ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 27- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನೈತಿಕತೆ ಇದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾದ ಹೀನಾಯ ಸೋಲಿನ ಹೊಣೆ ಹೊತ್ತು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಉಪಮೇಯರ್ ಎಸ್.ಹರೀಶ್ ಒತ್ತಾಯಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 9 ಮಂದಿ ಸಂಸದರು ಆರಿಸಿ ಬಂದಿದ್ದರು. ಆದರೆ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ.

9 ಮಂದಿ ಇದ್ದ ಸಂಸದ ಸ್ಥಾನವನ್ನು ಒಂದು ಸ್ಥಾನಕ್ಕೆ ಇಳಿಸಿದ ಅಪಕೀರ್ತಿ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಆಗ್ರಹಿಸಿದರು.

ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಎಲ್ಲ ಕಡೆಗಳಲ್ಲೂ ಕಾಂಗ್ರೆಸ್ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ. ಸ್ವತಃ ದಿನೇಶ್ ಗುಂಡೂರಾವ್ ಅವರು ಪ್ರತಿನಿಧಿಸುವ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲೂ ಅಲ್ಲಿನ ಮತದಾರರು ಬಿಜೆಪಿ ಪಕ್ಷಕ್ಕೆ ಲೀಡ್ ನೀಡಿದ್ದಾರೆ.

ಮತದಾರರ ಈ ತೀರ್ಮಾನವನ್ನು ಗಮನಿಸಿದರೆ ದಿನೇಶ್ ಗುಂಡೂರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಚುನಾವಣೆಗೂ ಮುನ್ನ ನೈತಿಕತೆ, ಪ್ರಾಮಾಣಿಕತೆ ಬಗ್ಗೆ ಭಾಷಣ ಬಿಗಿಯುತ್ತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ದಿನೇಶ್ ಅವರಿಗೆ ಫಲಿತಾಂಶ ಹೊರಬಿದ್ದ ನಂತರ ಅವರ ನೈತಿಕತೆ ಎಲ್ಲಿ ಹೋಯಿತು ಎಂದು ಹರೀಶ್ ಪ್ರಶ್ನಿಸಿದ್ದಾರೆ.

ಫಲಿತಾಂಶದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ದಿನೇಶ್ ಗುಂಡೂರಾವ್ ಬಾಯಿಮಾತಿನಲ್ಲಿ ಹೇಳಿಕೆ ನೀಡಿದ್ದರು. ವರಿಷ್ಠರು ರಾಜೀನಾಮೆ ನೀಡುವುದು ಬೇಡ ಎಂದ ಕೂಡಲೇ ಅಧ್ಯಕ್ಷ ಗಾದಿಯಲ್ಲಿ ಅವರು ಮುಂದುವರೆದಿದ್ದಾರೆ.

ದಿನೇಶ್ ಗುಂಡೂರಾವ್ ಅವರಲ್ಲಿ ನೈತಿಕತೆ ಇದ್ದರೆ ತಮ್ಮ ಶಾಸಕ ಸ್ಥಾನಕ್ಕೆ ಅಲ್ಲದಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾದರೂ ರಾಜೀನಾಮೆ ನೀಡುವುದು ಸೂಕ್ತ ಎಂದು ಹರೀಶ್ ಅಭಿಪ್ರಾಯಪಟ್ಟಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ