ಎಸ್.ಜಾನಕಿ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಆಸ್ಪತ್ರೆಯಿಂದ ಡಿಶ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 4- ಗಾನಕೋಗಿಲೆ ಎಸ್.ಜಾನಕಿ ಅವರು ಕಾಲು ಜಾರಿ ಬಿದ್ದು ಮೂಳೆ ಮುರಿದಿರು ವುದರಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದಲ್ಲಿರುವ ಸಂಬಂಧಿಕರ ಮನೆಗೆ ಕಳೆದ ಮೂರು ದಿನಗಳ ಹಿಂದೆ ಜಾನಕಿಯವರು ಬಂದಿದ್ದರು.

ಮನೆಯಲ್ಲಿ ಅಡ್ಡಾಡುತ್ತಿದ್ದಾಗ, ಕಾಲು ಜಾರಿಬಿದ್ದು ಸೊಂಟದ ಭಾಗದಲ್ಲಿ ಸಣ್ಣ ಫ್ರಾಕ್ಚರ್ ಆಗಿತ್ತು. ಹಾಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದು, ಯಶಸ್ವಿ ಯಾಗಿದೆ. ನಾಳೆಯೊಳಗೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದು, ಅವರಿಗೆ ಕೆಲದಿನಗಳ ವಿಶ್ರಾಂತಿ ಅಗತ್ಯವಿದೆ ಎಂದು ಹೇಳಿದ್ದಾರೆ.

ತಮ್ಮ ಫಾಮ್‍ಹೌಸ್‍ನಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿರುವ ಜಾನಕಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಗಾನಕೋಗಿಲೆ ಎಸ್. ಜಾನಕಿ ಅವರು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಾಗ ಕಾಲು ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕ್ಸಿತೆ ಪಡೆದು ಗುಣಮುಖರಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಗಾಯಕಿ ಎಸ್.ಜಾನಕಿ ಅವರು ಮೈಸೂರಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಾಲು ಜಾರಿ ಬಿದ್ದು, ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು.

ಎಸ್ ಜಾನಕಿ ಅವರು ಏಪ್ರಿಲ್ 23 ರಂದು 81ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಎಸ್ ಜಾನಕಿ ಅವರು ದಕ್ಷಿಣದಲ್ಲೇ ಒಟ್ಟು 48,000 ಹಾಡುಗಳನ್ನು ಹಾಡಿದ್ದಾರೆ. 1957ರಲ್ಲಿ ಹಾಡಲು ಆರಂಭಿಸಿದ ಅವರು ಈಗ ಹಾಡುವುದನ್ನು ನಿಲ್ಲಿಸಿದ್ದಾರೆ. ವಿದೇಶಿ ಸೇರಿದಂತೆ ಹದಿನೈದು ಭಾಷೆಗಳಲ್ಲಿ ಹಾಡಿದ ಖ್ಯಾತಿ ಎಸ್ ಜಾನಕಿ ಅವರದು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ