ಎಸ್.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ, ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಆ.5-ಖ್ಯಾತ ಹಿನ್ನೆಲೆ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೂ ಕೊರೊನಾ ವೈರಸ್ ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ನನಗೆ ಜ್ವರ, ಕೆಮ್ಮು, ನೆಗಡಿ ಮತ್ತು ಉಸಿರಾಟದ ಸಮಸ್ಯೆ ಇತ್ತು. ವೈದ್ಯರ ಬಳಿ ಪರೀಕ್ಷಿಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.

ಈಗ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಜ್ವರ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಅಭಿಮಾನಿಗಳು ಮತ್ತು ಬಂಧು-ಮಿತ್ರರಿಗಾಗಿ ವಿಡಿಯೋ ಒಂದರಲ್ಲಿ ಮಾತನಾಡಿರುವ ಡಾ.ಎಸ್‍ಪಿಬಿ ನಾನು ಚೇತರಿಸಿಕೊಳ್ಳುತ್ತಿದ್ದೇನೆ.

ಆತಂಕ ಪಡುವ ಅಗತ್ಯವಿಲ್ಲ. ಈಗ ಸದ್ಯಕ್ಕೆ ಕ್ವಾರಂಟೈನ್‍ನಲ್ಲಿದ್ದೇನೆ. ನನ್ನನ್ನು ಸಂಪರ್ಕಿಸಲು ಕೆಲ ದಿನಗಳ ಕಾಲ ಯತ್ನಿಸಬೇಡಿ ಎಂದು ಅವರು ತಿಳಿಸಿದ್ದಾರೆ.

Facebook Comments

Sri Raghav

Admin