ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಬಾರದು : ಸಾ.ರಾ.ಮಹೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಡಿ.23- ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬಾರದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.  ಜಿಲ್ಲಾಧಿಕಾರಿ ಕಚೇರಿ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಕಾಯ್ದೆ ವಿರುದ್ದ ಪರ ಅಥವಾ ವಿರುದ್ಧ ಪ್ರತಿಭಟನೆ ನಡೆಸುವುದು ಸಾರ್ವಜನಿಕರ ಹಕ್ಕು.

ಆ ಹಕ್ಕನ್ನು ಮೊಟಕುಗೊಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದು ಸರಿಯಲ್ಲ ಎಂದು ತಿಳಿಸಿದರು. ಪ್ರತಿಭಟನೆ ನಡೆಸಲು ಹಲವು ನಿಬಂಧನೆಗಳನ್ನು ಹಾಕಿದ್ದಾರೆ. ಪ್ರತಿಭಟನೆ ನಡೆಸಲು ನಿಬಂಧನೆ ವಿಧಿಸುವ ಅಗತ್ಯವಿತ್ತೇ? ಎಂದು ಅವರು ಪ್ರಶ್ನಿಸಿದರು. ಪ್ರ ತಿಭಟನೆ ಸಂದರ್ಭದಲ್ಲಿ ನಿಷೇದಾಜ್ಞೆ ಹೇರಿರುವುದು ಸರಿಯಲ್ಲ.

ಪ್ರತಿಭಟನೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಸಾ.ರಾ.ಮಹೇಶ್ ಆಗ್ರಹಿಸಿದರು.  ಶಾಸಕ ಅಶ್ವಿನ್‍ಕುಮಾರ್, ಮಾಜಿ ಮೇಯರ್ ನಿಂಗಪ ಮತ್ತು ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook Comments