ಸಚಿವರುಗಳ ಮಂಪರು ಪರೀಕ್ಷೆಗೆ ಮಾಡಬೇಕು : ಮಿಗಾ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.6- ಸಿಡಿ ವಿಚಾರವಾಗಿ ಸಚಿವರುಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಮತ್ತು ಅವರು ಸಲ್ಲಿಸಿರುವ ನಿರೀಕ್ಷಣಾ ನಿರ್ಬಂಧ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯಾಸತ್ಯತೆಯನ್ನು ಸಮಾಜಕ್ಕೆ ತಿಳಿಸಲು ಕಾನೂನು ಅವಕಾಶ ಮಾಡಿಕೊಟ್ಟಿದೆ.

ಆದರೆ, ಸಂಪುಟದ ಆರು ಮಂದಿ ಸಚಿವರು ತಮ್ಮ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಮತ್ತು ಮಾನಹಾನಿ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಇದು ಅವರುಗಳು ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಸಂದರ್ಭದಲ್ಲಿ ಅವರ ಸಾಧನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಬರುವಂತೆ ಮಾಡಿದೆ.

ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದನ್ನು ನೋಡಿದರೆ ಇವರು ತಕ್ಷಣವೇ ಮಂತ್ರಿಗಿರಿಗೆ ರಾಜೀನಾಮೆ ನೀಡಬೇಕು.

ನ್ಯಾಯಾಲಯ ಅವರ ಅರ್ಜಿಯನ್ನು ವಜಾ ಮಾಡಬೇಕು ಮತ್ತು ಇವರ ಮಂಪರು ಪರೀಕ್ಷೆ ಮಾಡಬೇಕೆಂದು ಸಚಿನ್ ಮಿಗಾ ಒತ್ತಾಯಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.

Facebook Comments

Sri Raghav

Admin