ಗೆಹ್ಲೋಟ್ ವಿರುದ್ಧ ಪೈಲೆಟ್ ಬಂಡಾಯ, ಪತನದಂಚಿನಲ್ಲಿ ರಾಜಸ್ಥಾನ ಸರ್ಕಾರ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ/ ಜೈಪುರ : ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ರಾಜಸ್ಥಾನದಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ.ಅಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿನ್ನೆಯಷ್ಟೇ ಆರೋಪ ಮಾಡಿದ್ದರು.

ಈ ಬೆಳವಣಿಗೆಗಳ ನಡುವೆಯೇ ಸಿ.ಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿರುವವರು ಸ್ವತಃ ಉಪಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಆಗಿರುವ ಸಚಿನ್ ಪೈಲೆಟ್. ಕಾಂಗ್ರೆಸ್‌ ಶಾಸಕರ ಖರೀದಿಗೆ ಕುದುರೆ ವ್ಯಾಪಾರ ನಡೆಸಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಪಡೆಯು (ಎಸ್‌ಒಜಿ) ಪ್ರಕರಣ ದಾಖಲಿಸಿ ಬಂಧಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ಪೊಲೀಸರು ಸಚಿನ್ ಪೈಲಟ್‌ಗೆ ನೋಟಿಸ್‌ ಕಳುಹಿಸಿದ್ದರು.

ಈ ಬೆಳವಣಿಗೆ ನಡೆದ ನಂತರ ಪೈಲೆಟ್ ತಮ್ಮ ಬೆಂಬಲಿಗರ ಮೂಲಕ ಗೆಹ್ಲೋಟ್ ವಿರುದ್ಧ ತಿರುಗಿ ಬಿದಿದ್ದಾರೆ. ತಮ್ಮನ್ನು ಸರ್ಕಾರ ಹಾಗೂ ಪಕ್ಷದಲ್ಲಿ ಅಶೋಕ್ ಗೆಹ್ಲೋಟ್ ಮೂಲೆಗುಂಪು ಮಾಡಲು ಯತ್ನಿಸುತ್ತಿರುವುದಕ್ಕೆ ಸಚಿನ್ ಪೈಲೆಟ್ ತಮ್ಮ ಬೆಂಬಲಿಗ ಶಾಸಕರ ಮೂಲಕ ದೆಹಲಿಗೆ ದೌಡಯಿಸಿದ್ದಾರೆ.

ಮೂಲಗಳ ಪ್ರಕಾರ ಗೆಹ್ಲೋಟ್ ನಾಯಕತ್ವದ ವಿರುದ್ಧ ಸುಮಾರು 24 ಶಾಸಕರು ಹಾಗೂ ಮೂವರು ಪಕ್ಷೇತರರು ಬಂಡಾಯದ ಕಹಳೆ ಉದಿದ್ದಾರೆ. ಸಚಿನ್ ಪೈಲಟ್ ಬೆಂಬಲಿತ ಶಾಸಕರಲ್ಲಿ ಕೆಲವು ಸಚಿವರು ಕೂಡ ಭಾಗಿಯಾಗಿದ್ದು, ಇವರೆಲ್ಲರನ್ನೂ ದೆಹಲಿ ಹೊರವಲಯದಲ್ಲಿರುವ ಗುರಗಾಂವ್ ನ ರೆಸಾರ್ಟ್‌ ನಲ್ಲಿ ಇಡಲಾಗಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿರುವ ಪೈಲಟ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪಕ್ಷದಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ವಿವರಣೆ ನೀಡಲಿದ್ದಾರೆ.  ರಾಜ್ಯದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲು ಸಚಿನ್ ಪೈಲಟ್ ಬೆಂಬಲಿಗ ಶಾಸಕರೊಂದಿಗೆ ನವದೆಹಲಿಗೆ ಬಂದಿದ್ದಾರೆ.

ಒಂದು ಮೂಲದ ಪ್ರಕಾರ ಸಚಿನ್ ಪೈಲೆಟ್ ನಿನ್ನಯೇ ಕಾಂಗ್ರೆಸ್ ಹಿರಿಯ ಮುಖಂಡ ಆಹಮ್ಮ ದ್ ಪಟೇಲ್ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗ ಬಗ್ಗೆ ಮಾಹಿತಿ ನೀಡಿದ್ದಾರೆ. ಗೆಹ್ಲೋಟ್ ಉದ್ದೇಶ ಪೂರ್ವಕವಾಗಿ ತಮ್ಮನ್ನು ಹಾಗೂ ಬೆಂಬಲಿಗರನ್ನು ಕಡೆಗಣಿಸುತ್ತಿದ್ದಾರೆ.ಪರಿಸ್ಥಿತಿ ಇದೇ ರೀತಿ ಮುಂದುವರೆದರೆ, ತಾವು ಪಕ್ಷದಿಂದ ಹೊರಬಾರಬೇಕಾಗಿತ್ತದ ಎಂದು ನೇರವಾಗಿಯೇ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

ಶೀಘ್ರದಲ್ಲೇ ತಾವು ಗೆಹ್ಲೋಟ್ ಜೊತೆ ಮಾತುಕತೆ ನಡೆಸಿ ಸಮಸ್ಯೆ ಇತ್ಯಾರ್ಥಪಡಿಸಿ, ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸುವ ಭರವಸೆಯನ್ನು ನೀಡಿದ್ದಾರೆ. ಆದರೆ , ಇದಕ್ಕೆ ಪೈಲೆಟ್ ಒಪ್ಪದೆ,ಬೆಂಬಲಿಗರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಡಲು ಮುಂದಾದರು.

# ಪೈಲೆಟ್ ಗೆ ಬಿಜೆಪಿ ಗಾಳ..?
ಇ‌ನ್ನು ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗೆಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವ ಪ್ರತಿಪಕ್ಷ ಬಿಜೆಪಿ , ಕಾಂಗ್ರೆಸ್ ಯುವ ನಾಯಕ ಪೈಲೆಟ್ ಸೆಳೆಯಲು ಮುಂದಾಗಿದೆ. ಸದ್ಯ ಸ್ಥಳೀಯ ನಾಯಕರನ್ನು ಗಣನೆಗೆ ತೆಗೆದು ಕೊಳ್ಳದೆ ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾಗಿ ರಾಜ್ಯಸಭೆಯ ಸದಸ್ಯರಾಗಿರುವ ರಾಜಮನೆತನಕ್ಕೆ ಸೇರಿರುವ ಯುವನಾಯಕನ ಮೂಲಕ ಸಳೆಯಲು ಕಸರತ್ತು ಆರಂಭಿಸಿದೆ.

ಅಶೋಕ್ ಗೆಹ್ಲೋಟ್ ನಾಯಕತ್ವ ಬದಲಾವಣೆ ಮಾಡಲು ಹೈಕಮಾಂಡ್ ಒಪ್ಪದಿದ್ದರೆ, ಮಧ್ಯಪ್ರದೇಶದಲ್ಲಿ ಜೋತಿರಾಧಿತ್ಯ ಸಿಂಧ್ಯಾ ತುಳಿದ ಹಾದಿಯನ್ನೇ ಸಚಿನ್ ಪೈಲೆಟ್ ತುಳಿದರೂ ಅಚ್ಚರಿಯಿಲ್ಲ. ಬಿಜೆಪಿ ತಮ್ಮ ಶಾಸಕರನ್ನುಖರೀದಿಸಿ ಸರ್ಕಾರ ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇರವಾಗಿಯೇ ಆರೋಪಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಸಮಯದಿಂದಲೂ ಗೆಹ್ಲೋಟ್ ಈ ಆರೋಪವನ್ನು ಮಾಡುತ್ತಲೇ ಬಂದಿದ್ದಾರೆ. ಆದರೆ ಸಚಿನ್ ಪೈಲೆಟ್ ತಮ್ಮ ಬೆಂಬಲಿಗ ಶಾಸಕರನ್ನು ಕರೆದುಕೊಂಡು ದೆಹಲಿಗೆ ಬಂದಿರುವುದು ರಾಜ್ಯ ಸರ್ಕಾರ ಉಳಿಸಲೋ ಅಥವಾ ಹೈಕಮಾಮಡ್‌ಗೆ ಒತ್ತಡ ಹೇರಿ ಮುಖ್ಯಮಂತ್ರಿ ಪದವಿ ಪಡೆಯಲೋ ಎಂಬುದರ ಕುರಿತು ಇನ್ನೂ ಗೊಂದಲವಿದೆ.

ದಿಢೀರ್‌ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಗೆಹ್ಲೋಟ್‌ ತನ್ನ ಮಂತ್ರಿಗಳು, ಆಪ್ತ ಶಾಸಕರು ಮತ್ತು ಪಕ್ಷೇತರ ಶಾಸಕರ ಜೊತೆ ಸಭೆ ನಡೆಸಿ ಪತ್ರದ ಮೂಲಕ ಸರ್ಕಾರಕ್ಕೆ ಬೆಂಬಲ ನೀಡುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜಕೀಯ ಬೆಳವಣಿಗೆ ಕುರಿತು ಮಾತನಾಡಿದ್ದು, “ಕಮಲನಾಥ್ ಸರ್ಕಾರವನ್ನು ಉರುಳಿಸಿದಂತೆಯೇ ನಮ್ಮ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡುವ ಮೂಲಕ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ” ಎಂದು ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ನಡುವಿನ ಅಸಮಾಧಾನ ರಹಸ್ಯವಾಗಿ ಏನೂ ಉಳಿದಿಲ್ಲ. ಸಚಿನ್ ಪೈಲೆಟ್ ಮುಖ್ಯಮಂತ್ರಿಯಾಗಬೇಕು ಎಂದು ಪ್ರಯತ್ನ ನಡೆಸಿದ್ದಾರೆ. ಈಗ ಅವರು ಆಪ್ತ ಶಾಸಕರ ಜೊತೆ ದೆಹಲಿಗೆ ತೆರಳಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಹೊರ ಬಂದರು. ಅವರ ಜೊತೆ 20ಕ್ಕೂ ಅಧಿಕ ಶಾಸಕರು ರಾಜೀನಾಮೆ ಕೊಡುವ ಮೂಲಕ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡಿತು. ಇದೇ ಮಾದರಿಯನ್ನು ಸಚಿನ್ ಪೈಲೆಟ್ ಅನುಸರಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ..

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದ ಬಳಿಕ 69 ವರ್ಷದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು 42 ವರ್ಷದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ ನಡುವೆ ಭಿನ್ನಮತ ಎದ್ದಿತ್ತು. ಆಗ ಹೇಗೂ ಕಾಂಗ್ರೆಸ್‌ ಹೈಕಮಾಂಡ್‌ ಭಿನ್ನಮತವನ್ನು ಶಮನ ಮಾಡಲು ಸಚಿನ್ ಪೈಲಟ್‌ಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ ಸಮಾಧಾನ ಮಾಡಿತ್ತು.

ಆದರೆ ಈಗ ಭಿನ್ನಮತ ಮತ್ತಷ್ಟು ಉಲ್ಬಣಗೊಂಡಿದ್ದು ಪೈಲಟ್‌ ಅವರು ತಮ್ಮ ಆಪ್ತ 25 ಶಾಸಕರ ಜೊತೆ ಹೈಕಮಾಂಡ್‌ ಭೇಟಿಯಾಗಲು ದೆಹಲಿಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಶಾಸಕರನ್ನು ಖರೀದಿಸಲು ಬಿಜೆಪಿ 25 ಕೋಟಿ ನೀಡುವ ಆಮಿಷ ಒಡ್ಡಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್‌ ಪುನಿಯಾ ಪ್ರತಿಕ್ರಿಯಿಸಿ, ಮಧ್ಯಪ್ರದೇಶದಲ್ಲಿ ಉತ್ತಮ ಆಡಳಿತ ನೀಡಲು ಕಾಂಗ್ರೆಸ್‌ ವಿಫಲವಾಗಿದೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ಗೆಹ್ಲೋಟ್‌ ಬಿಜೆಪಿ ವಿರುದ್ಧ ಮಾತನಾಡಿದ್ದಾರೆ. ಸರ್ಕಾರದಲ್ಲಿ ಎಲ್ಲವೂ ಸರಿ ಇದ್ದರೆ ಹೆದರಿಕೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಒಟ್ಟು 200 ವಿಧಾನ ಸಭಾ ಕ್ಷೇತ್ರಗಳ ಪೈಕಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳನ್ನು ಗೆದ್ದಿದ್ದರೆ ಬಿಜೆಪಿ 72 ಸ್ಥಾನವನ್ನು ಗೆದ್ದಿತ್ತು. ಬಳಿಕ ಬಿಎಸ್‌‌ಪಿಯ 6 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 13 ಮಂದಿ ಪಕ್ಷೇತರ ಶಾಸಕರ ಪೈಕಿ 12 ಮಂದಿ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇತ್ತ ಬಿಜೆಪಿ ಬಳಿ 72 ಶಾಸಕರು ಇದ್ದಾರೆ. ಬಿಜೆಪಿಗೆ ಆರ್‌ಎಲ್‌ಪಿಯ ಒಬ್ಬರು ಮತ್ತು ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ.

ಮೂವರು ಪಕ್ಷೇತರ ಶಾಸಕರಿಗೆ ಹಣದ ಆಮಿಷವೊಲಾಗಿದೆ ಎಂದು ಆರೋಪಿಸಲಾಗಿದ್ದು, ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ ಈ ಕುರಿತು ತನಿಖೆಯನ್ನು ಆರಂಭಿಸಿದೆ. ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ದೆಹಲಿ ತಲುಪಿದ್ದು, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ? ಎಂದು ಕಾದು ನೋಡಬೇಕು.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯಸಭಾ ಚುನಾವಣೆ ಸಮಯದಿಂದಲೂ ಬಿಜೆಪಿ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈಗ ಮೂವರು ಪಕ್ಷೇತರ ಶಾಸಕರಿಗೆ 25 ರಿಂದ 30 ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪ ಮಾಡಲಾಗಿದ್ದು, ಈ ಕುರಿತು ತನಿಖೆ ಆರಂಭವಾಗಿದೆ.

# ಆರೋಪ – ಪ್ರತ್ಯೇರೋಪ :
ಮಾರುಕಟ್ಟೆಯಲ್ಲಿ ‘ಆಡು’ಗಳನ್ನು ಖರೀದಿಸಿದಂತೆ ನಮ್ಮ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ‘ಕುದುರೆ ವ್ಯಾಪಾರ’ ಮತ್ತು ‘ಆನೆ ವ್ಯಾಪಾರ’ ನಂತರ ಶಾಸಕರ ವಿಷಯದಲ್ಲಿ ‘ಆಡು ವ್ಯಾಪಾರ’ದ ಕುರಿತು ಮಾತನಾಡಲು ಸಿಎಂ ಪ್ರಾರಂಭಿಸಿದ್ದಾರೆ. ಶಾಸಕರಿಗೆ ಅಂತಹ ಪದಗಳನ್ನು ಬಳಸುವ ಮೂಲಕ ಸಿಎಂ ಅವಮಾನ ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ಅಲ್ಲದೆ, ಸಿಎಂ ಗೆಹ್ಲೋಟ್​ ಅವರು ತಮ್ಮ ಸ್ವಂತ ಶಾಸಕರನ್ನೇ ನಂಬುತ್ತಿಲ್ಲ ಎಂದು ಹೇಳಿದ್ದಾರೆ.ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್,” ಸಿಎಂ ಗೆಹ್ಲೋಟ್ ಹೈಕಮಾಂಡ್ ಜೊತೆ ಏನು ಮಾತನಾಡಿದ್ದಾರೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಬಿಜೆಪಿ ಪಿತೂರಿ ನಡೆಸುತ್ತಿದೆ, ಈ ಬಗ್ಗೆ ನಮಗೆ ಗೊತ್ತಿದೆ.

ಇದು ಮಧ್ಯಪ್ರದೇಶವಲ್ಲ, ಬಿಜೆಪಿಯ ಪಿತೂರಿ ಇಲ್ಲಿ ಯಶಸ್ವಿಯಾಗವುದಿಲ್ಲ. ಅದನ್ನು ನಾವು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ತೋರಿಸಿದ್ದೇವೆ. ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಸತೀಶ್ ಪುನಿಯಾ, “ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒಬ್ಬ ಕುತಂತ್ರ ರಾಜಕಾರಣಿ, ಅವರು ಆಡಳಿತದಲ್ಲಿ ವಿಫಲರಾಗಿದ್ದಕ್ಕಾಗಿ ಬಿಜೆಪಿಯನ್ನು ದೂಷಿಸಲು ಪ್ರಾರಂಭಿಸಿದ್ದಾರೆ.

ಎಲ್ಲಾ ಆರೋಪಗಳು ಸಂಪೂರ್ಣವಾಗಿ ಧಾರರಹಿತವಾಗಿವೆ. ಅವರು ಶಾಸಕರ ಸಂಖ್ಯಾ ಬಲವನ್ನು ಹೊಂದಿರುವಾಗ ಯಾರು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಾರೆ” ಎಂದು ಪ್ರಶ್ನಿಸಿದ್ದಾರೆ.ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆದರೆ ಕಮಲ್‌ನಾಥ್‌ ಮತ್ತು ಜ್ಯೋತಿರಾದಿತ್ಯ ಸಿಂದಿಯಾ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸರ್ಕಾರ ಪತನಗೊಂಡಿತ್ತು. ಜುಲೈನಲ್ಲಿ ನಡೆದ ಸಂಪುಟ ವಿಸ್ತರಣೆಯಲ್ಲಿ ಸಿಂದಿಯಾ ಬಣದ 12 ಮಂದಿ ಶಾಸಕರಿಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಂತ್ರಿಸ್ಥಾನ ನೀಡಿದ್ದರು.

Facebook Comments

Sri Raghav

Admin