ಯಾವುದೇ ಕಾರಣಕ್ಕೂ ನಾನು ಬಿಜೆಪಿ ಸೇರಲ್ಲ : ಸಚಿನ್ಪೈಲಟ್
ಈ ಸುದ್ದಿಯನ್ನು ಶೇರ್ ಮಾಡಿ
ಜೈಪುರ್, ಜು.15- ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಸಚಿನ್ಪೈಲಟ್ ಸ್ಪಷ್ಟಪಡಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ತರಲು ನಾನು ಸಾಕಷ್ಟು ಬೆವರು ಹರಿಸಿದ್ದೇನೆ.
ಹೀಗಾಗಿ ನಾನು ಪಕ್ಷ ಬಿಡುವ ಬಗ್ಗೆ ಯೋಚನೆ ಮಾಡಿಲ್ಲ. ಹಾಗೂ ಬಿಜೆಪಿ ಸೇರಲು ನಿರ್ಧರಿಸಿಲ್ಲ ಎಂದು ಪೈಲಟ್ ತಿಳಿಸಿದ್ದಾರೆ.
ಕೆಲವರು ನಾನು ಬಿಜೆಪಿ ಸೇರುತ್ತೇನೆ ಎಂದು ಗಾಳಿ ಸುದ್ದಿ ಹಬ್ಬಿಸುತ್ತಾ ಹೊಲಸು ರಾಜಕೀಯ ಮಾಡುತ್ತಿದ್ದಾರೆ ಎಂದು ಪೈಲಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Facebook Comments