35 ಕೋಟಿ ರೂ. ಆಫರ್ ಆರೋಪ : ಗಿರಿರಾಜ್‍ಸಿಂಗ್‍ಗೆ ಸಚಿನ್ ಪೈಲಟ್ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ,ಜು.22- ಬಿಜೆಪಿಗೆ ಸೇರಲು ಸಚಿನ್ ಪೈಲಟ್ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಅವರಿಗೆ ಸಚಿನ್ ಪೈಲಟ್ ಲೀಗಲ್ ನೊಟೀಸ್ ಕಳುಹಿಸಿದ್ದಾರೆ.

ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದಿದ್ದೆ ಎಂದು ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಆರೋಪಿಸಿದ್ದರು.

ಈ ಆರೋಪವನ್ನು ತಿರಸ್ಕರಿಸಿದ್ದ ಸಚಿನ್ ಪೈಲಟ್, ನ್ಯಾಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದರು.

ಅಲ್ಲದೇ ತಮ್ಮ ಮೇಲಿನ ಇಂತಹ ಅಸಹ್ಯಕರ ಆರೋಪಗಳಿಗೆ ಮಾಡಿರುವುದು ಹೆಚ್ಚು ದುಃಖ ನೀಡುತ್ತದೆ ಎಂದಿದ್ದಾರೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಗಿರಿರಾಜ್ ಸಿಂಗ್ಗೆ ಸಚಿನ್ ಪೈಲಟ್ ಲೀಗಲ್ ನೋಟಿಸ್ ನೀಡಿದ್ದಾರೆ.

ಅಷ್ಟೇ ಅಲ್ಲ, ಈ ಹೇಳಿಕೆ ನನಗೆ ಅಚ್ಚರಿ ಏನು ನೀಡಿಲ್ಲ. ಕಾಂಗ್ರೆಸ್ ನಾಯಕರು ಹೀಗೊಂದು ಆರೋಪ ಮಾಡುತ್ತಾರೆ ಎಂಬುದು ನನಗೆ ಮೊದಲೇ ತಿಳಿದಿತ್ತು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕರೆದಿದ್ದ ಎರಡು ಶಾಸಕಾಂಗ ಪಕ್ಷದ ಸಭೆಗೆ ಬಂಡೆದ್ದಿರುವ ಸಚಿನ್ ಪೈಲೆಟ್ ಮತ್ತು ಅವರ 18 ಮಂದಿ ಬೆಂಬಲಿಗ ಶಾಸಕರು ಭಾಗವಹಿಸಿರಲಿಲ್ಲ.

ಇದೇ ಆಧಾರದ ಮೇಲೆ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ರಾಜಸ್ಥಾನದ ಸ್ಪೀಕರ್ ಸಿ.ಪಿ. ಜೋಷಿ ಅವರಿಗೆ ದೂರು ನೀಡಿದ್ದಾರು.

ಕಾಂಗ್ರೆಸ್ ರೆಬೆಲ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು. ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿರುವ ಹೈಕೋರ್ಟ್, ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸ್ಪೀಕರ್ ಸಿ.ಪಿ.ಜೋಷಿಯವರಿಗೆ ಸೂಚನೆ ನೀಡಿದೆ.

ತಮ್ಮ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿಂದೆ ಸಚಿನ್ ಪೈಲಟ್ ಬಣದಲ್ಲಿದ್ದ ಭನ್ವರ್ ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಸರ್ಕಾರವನ್ನು ಉರುಳಿಸಿರುವ ಕುರಿತು ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಕಾಂಗ್ರೆಸ್ ಪಕ್ಷ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

ಬಂಡಾಯ ಶಾಸಕರು ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ್ದ ಕೋರ್ಟ್, ತೀರ್ಪನ್ನು ಶುಕ್ರವಾರದವರೆಗೂ ಕಾಯ್ದಿರಿಸಿ ಅಲ್ಲಿವರೆಗೆ ಶಾಸಕರ ವಿರುದ್ಧ ಯಾವುದೇ ರೀತಿಯ ಕ್ರಮಕೈಗೊಳ್ಳಬಾರದು ಎಂದು ಹೇಳಿದೆ. ಇದರಿಂದ ಸಚಿನ್ ಪೈಲಟ್ ಬಣಕ್ಕೆ ತಾತ್ಕಲಿಕ ರಿಲೀಫ್ ಲಭಿಸಿದೆ.

Facebook Comments

Sri Raghav

Admin