ಮಾಜಿ ಸಿಎಂ, ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ಮೇ 8-ಸಮಾಜವಾದಿ ಪಕ್ಷದ ಧುರೀಣ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್(80) ಅಸ್ವಸ್ಥರಾಗಿದ್ದು, ಅವರನ್ನು ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಟ್ಟೆ ನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಗೆ ಬಳಸುತ್ತಿದ್ದ ಅವರನ್ನು ಮೇಡಾಂಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ದೇಹಸ್ಥಿತಿ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ತಜ್ಞ ವೈದ್ಯರು ತಿಳಿಸಿದ್ದಾರೆ.

ಮುಲಾಯಂ ಸಿಂಗ್ ಅವರ ಪುತ್ರ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಸಹೋದರ ಶಿವಪಾಲ್ ಸಿಂಗ್ ಸೇರಿದಂತೆ ಸಮಾಜವಾದಿ ಪಕ್ಷದ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

Facebook Comments

Sri Raghav

Admin