ಕನ್ನಡದ ಖ್ಯಾತ ನಿರ್ದೇಶಕ ಕೆ.ವಿ.ರಾಜು ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.24-ಬೆಳ್ಳಿ ಕಾಲುಂಗುರ, ಯುದ್ಧಕಾಂಡ, ಹುಲಿಯಾ ಸೇರಿದಂತೆ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕರಾಗಿದ್ದ ಕೆ.ವಿ.ರಾಜು(67) ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಹಲವು ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕೆ.ವಿ.ರಾಜು ಅವರು ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಾಜಾಜಿನಗರದ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹರಿಶ್ಚಂದ್ರ ಘಾಟ್‍ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಇಂದ್ರಜಿತ್, ಯುಗಪುರಷ ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ಸ್ಯಾಂಡಲ್‍ವುಡ್‍ನಲ್ಲಿ ನಿರ್ದೇಶಿಸಿದ್ದ ಕೆ.ವಿ.ರಾಜು ಅವರು ಅಮಿತಾ ಬಚ್ಚನ್ ನಟನೆಯ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು.

ಯಶಸ್ವಿ ನಿರ್ದೇಶಕರಾದ ಕೆ.ವಿ.ರಾಜು ಅವರ ನಿಧನ ಸ್ಯಾಂಡಲ್‍ವುಡ್‍ಗೆ ವರ್ಷದ ಕೊನೆಯಲ್ಲಿ ಆಘಾತ ನೀಡಿದೆ. ಕೆ.ವಿ.ರಾಜು ಅವರ ಅಗಲಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಪದಾಕಾರಿಗಳು, ಚಲನಚಿತ್ರ ನಿರ್ದೇಶಕರು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin