ವಿರೇನ್ ಖನ್ನಾಗೆ ಮನೆಗಳ ಮೇಲೆ ಸಿಸಿಬಿ ರೇಡ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.8- ಡ್ರಗ್ಸ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ಪಾರ್ಟಿ ಆಯೋಜಕನಾಗಿರುವ ವಿರೇನ್ ಖನ್ನಾಗೆ ಸೇರಿದ ಎರಡು ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ರಿಚ್‍ಮಂಡ್ ಸರ್ಕಲ್ ಸಮೀಪದ ಲ್ಯಾಂಡ್ ಫೋರ್ಡ್ ರಸ್ತೆಯಲ್ಲಿರುವ ಮನೆ ಹಾಗೂ ದೆಹಲಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಡ್ರಗ್ಸ್ ಜಾಲದ ಬಗ್ಗೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಈತ ಮೂರನೇ ಆರೋಪಿ. ಈತನನ್ನು ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಸಿ ಬೆಂಗಳೂರಿಗೆ ಕರೆ ತಂದಿದ್ದಾರೆ.

ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಎಂದು ತಿಳಿದು ಬಂದಿದೆ.

ಈತ ಪಾರ್ಟಿಗೆ ನಟ ನಟಿಯರು, ಗಣ್ಯ ವ್ಯಕ್ತಿಗಳ ಮಕ್ಕಳನ್ನೇ ಆಹ್ವಾನಿಸುತ್ತಿದ್ದ ಎಂದು ಗೊತ್ತಾಗಿದೆ. ವಿರೇನ್ ಖನ್ನಾ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರ ಆಪ್ತ ಎಂದು ತಿಳಿದು ಬಂದಿದೆ.

Facebook Comments

Sri Raghav

Admin