ಸ್ಯಾನಿಟೈಸರ್ ಘಟಕಕ್ಕೆ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

ಥಾಣೆ,ಏ.19-ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಸ್ಯಾನಿಟೈಸರ್ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಮುಂಬೈ-ನಾಸಿಕ್ ಹೆದ್ದಾರಿ ಸಮೀಪವಿರುವ ಘಟಕದಲ್ಲಿ ಮಧ್ಯರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಸಂಭವಿಸಿದೆ ಎಂದು ಥಾಣೆ ಮುನ್ಸಿಫಲ್ ಕಾಪೆರ್ರೇಷನ್ ಅಧಿಕಾರಿ ಸಂತೋಷ್ ಕದಮ್ ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಆರು ಅಗ್ನಿಶಾಮಕ ದಳದವರು ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಯಾನಿಟೈಸರ್ ಘಟಕಕ್ಕೆ ಬೆಂಕಿ ಬೀಳಲು ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Facebook Comments