35 ಸಿಬ್ಬಂದಿಗಳಿಗೆ ಕೊರೋನಾ, ಸಂಜಯ್ ಗಾಂಧಿ ಆಸ್ಪತ್ರೆ ಬಂದ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.15-ಕೊರೋನಾ ವಾರಿಯರ್ಸ್‍ಗಳನ್ನು ಮಹಾಮಾರಿ ಇನ್ನಿಲ್ಲದಂತೆ ಕಾಡುತ್ತಿದೆ. ಸಂಜಯ್ ಗಾಂಧಿ ಆಸ್ಪತ್ರೆಯ 35 ಸಿಬ್ಬಂದಿಗಳಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಆಸ್ಪತ್ರೆ ಕಾರ್ಯ ಸ್ಥಗಿತಗೊಂಡಿದೆ.

ಸಂಜಯ್‍ಗಾಂಧಿ ಆಸ್ಪತ್ರೆಯ ಐದು ವೈದ್ಯರು, 12 ನರ್ಸ್‍ಗಳು ಸೇರಿದಂತೆ 35ಕ್ಕೂ ಹೆಚ್ಚು ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಆಸ್ಪತ್ರೆಯ ಸೋಂಕಿತರ ಚಿಕಿತ್ಸೆ ವೇಳೆ ವೈದ್ಯರಿಗೆ ಕೊರೋನಾ ವಕ್ಕರಿಸಿರುವ ಸಾಧ್ಯತೆ ಇದೆ.

ವೈದ್ಯರು ಮತ್ತು ಸಿಬ್ಬಂದಿಗಳನ್ನು ಚಿಕಿತ್ಸೆಗೆ ಒಳಪಡಿಸಲಾಗಿದ್ದು ವೈದ್ಯರಿಲ್ಲದೆ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತಾಗಿದೆ.

ಬಿಬಿಎಂಪಿ ಕಚೇರಿಗೂ ಸೋಂಕು:
ಬಿಬಿಎಂಪಿಯ ದಕ್ಷಿಣ ವಲಯ ಜೆಸಿ ಕಚೇರಿಗೆ ಸೋಂಕು ತಗುಲಿದೆ. ದಕ್ಷಿಣ ವಲಯ ಜಂಟಿ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐದು ಸಿಬ್ಬಂದಿಗಳಿಗೆ ಸೋಂಕಿರುವುದು ಪತ್ತೆಯಾಗಿದೆ.

Facebook Comments

Sri Raghav

Admin