ಮುಂದಿನ 25 ವರ್ಷ ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ಆಡಳಿತ ನಡೆಸಲಿದೆ : ರಾವತ್

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ನ.15-ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮುಂದಿನ 25 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಲಿದೆ ಎಂದು ಪಕ್ಷದ ಪ್ರಭಾವಿನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.

ಮುಂಬೈನಲ್ಲಿಂದು ತಮ್ಮ 58ನೇ ಜನ್ಮದಿನ ಆಚರಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನೆ ವಕ್ತಾರ ರಾವತ್, ನಮ್ಮ ಪಕ್ಷವು ಕೇವಲ 5 ವರ್ಷ ಮಾತ್ರವಲ್ಲ, 25 ವರ್ಷಗಳ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಮುನ್ನಡೆಸುತ್ತದೆ ಎಂದು ವಿಶ್ವಾಸದಿಂದ ನುಡಿದರು.

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಸಂಬಂಧ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ನಡುವೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಸಿದ್ಧಪಡಿಸಲಾಗಿದೆ. ಈ ಬಗ್ಗೆ ಮೂರೂ ಪಕ್ಷಗಳ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

Facebook Comments