ಉಪಚುನಾವಣೆ ಮತದಾನ ಶಾಂತಿಯುತ : ಸಂಜೀವ್‍ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.5- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಿಗದಿತ ಸಮಯವಾದ ಬೆಳಗ್ಗೆ 7 ಗಂಟೆಯಿಂದ ಎಲ್ಲ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದೆ. ಎಲ್ಲ ಕಡೆಗಳಲ್ಲಿಯೂ ಮತದಾನ ಸುಸೂತ್ರವಾಗಿ ನಡೆಯುತ್ತಿದೆ. ಈತನಕ ಯಾವುದೇ ಗೊಂದಲ ಹಾಗೂ ತೊಂದರೆ ಉಂಟಾದ ವರದಿಗಳು ಬಂದಿಲ್ಲ.

15 ಕ್ಷೇತ್ರಗಳ 4115 ಮತಗಟ್ಟೆಗಳಲ್ಲೂ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೂ ಮತದಾನ ಮಾಡಲು ಅವಕಾಶವಿದೆ. ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅಲ್ಲದೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ ಎಂದು ಹೇಳಿದರು.

Facebook Comments