ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ಗುಣಮುಖ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.29- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಈಗ ಸಂಪೂರ್ಣವಾಗಿ ಗುಣಮುಖರಾಗುತ್ತಿದ್ದಾರೆ.

ನಿನ್ನೆ ಸಂಜೆ ಐಸಿಯುನಿಂದ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅವರು ಆಸ್ಪತ್ರೆಯಿಂದ ಡಿಸ್‍ಜಾರ್ಚ್ ಆಗುವ ಸಾಧ್ಯತೆಗಳಿವೆ.

ಸದಾಶಿವ ನಗರ ಠಾಣೆ ಪೊಲೀಸರು ಅವರ ಹೇಳಿಕೆಯನ್ನು ಸಂಜೆ ಪಡೆಯುವ ಸಾಧ್ಯತೆ ಇದೆ. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಂತರ ಅನೇಕ ವಿಚಾರಗಳು ಹೊರ ಬರಲಾರಂಭಿಸಿದವು. ಈ ಹಿನ್ನೆಲೆಯಲ್ಲಿ ಅವರ ನೀಡುವ ಹೇಳಿಕೆ ಅತ್ಯಂತ ಪ್ರಮುಖವಾಗಿದೆ.

ಯಾವ ಕಾರಣಕ್ಕಾಗಿ ಅವರು, ಆತ್ಮಹತ್ಯೆಗೆ ಯತ್ನಿಸಿದರು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin