ರಮೇಶ್ ಜಾರಕಿಹೊಳಿಗೆ ಕೌಂಟರ್ ಕೊಟ್ಟ ಸತೀಶ್‍ ಜಾರಕಿಹೊಳಿ…!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಏ.21- ಕಾಂಗ್ರೆಸ್‍ನಲ್ಲಿದ್ದುಕೊಂಡೇ ಬಿಜೆಪಿ ಪರವಾಗಿ ಕೆಲಸ ಮಾಡುತ್ತ ತಮ್ಮ ಬೆಂಬಲಿಗರನ್ನೆಲ್ಲ ಬಿಜೆಪಿ ಬೆಂಬಲಿಸುವಂತೆ ನಿನ್ನೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೆ ಅವರ ಸಹೋದರ ಸತೀಶ್‍ಜಾರಕಿಹೊಳಿ ಇಂದು ಬಿಜೆಪಿಯ ಸುಮಾರು 200ಕ್ಕೂ ಹೆಚ್ಚು ಜನರನ್ನು ಕಾಂಗ್ರೆಸ್‍ಗೆ ಸೆಳೆಯುವ ಮೂಲಕ ತಿರುಗೇಟು ನೀಡಲು ಮುಂದಾಗಿದ್ದಾರೆ.

ಸತೀಶ್ ಜಾರಕಿಹೊಳಿ ನಿವಾಸದ ಬಳಿ ನೂರಾರು ಜನ ಕಮಲದ ಮುಖಂಡರು, ಕಾರ್ಯಕರ್ತರು ನೆರೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಶಾಸಕರಾಗಿದ್ದು ಕೂಡ ಪಕ್ಷದಿಂದ ದೂರವುಳಿದಿರುವ ರಮೇಶ್ ಜಾರಕಿಹೊಳಿಯವರು ನಿನ್ನೆ ತಮ್ಮ ಬೆಂಬಲಿಗರಿಗೆ ಬಿಜೆಪಿ ಪರವಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದರು.

ತಮ್ಮ ನಿವಾಸದಲ್ಲಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಸೂಚನೆ ಕೊಟ್ಟಿದ್ದರು. ಇದು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ಸಂದರ್ಭದಲ್ಲಿ ಸಾಕಷು ಇರಿಸು ಮುರಿಸು ಉಂಟು ಮಾಡಿತ್ತು. ಇದಕ್ಕೆ ತಿರುಗೇಟು ನೀಡಲು ಅವರ ಸಹೋದರ ಸತೀಶ್ ಜಾರಕಿಹೊಳಿಯವರೇ ಮುಂದಾಗಿದ್ದು, ಬೆಳಗಾವಿ ಭಾಗದ ಹಲವು ಬಿಜೆಪಿ ಮುಖಂಡರನ್ನೇ ಕಾಂಗ್ರೆಸ್‍ನತ್ತ ಸೆಳೆಯಲು ಮುಂದಾಗಿದ್ದು, ಇಂದು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಬೆಳವಣಿಗೆ ಬೆಳಗಾವಿಯ ಬಿಜೆಪಿಗೆ ಶಾಕ್ ನೀಡಿದೆ. ಸೋದರರ ರಾಜಕೀಯ ಮೇಲಾಟದಲ್ಲಿ ಮತದಾರರ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಉಂಟು ಮಾಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin