ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡುವಂತೆ ಬೆಂಬಲಿಗರಿಂದ ಶಕ್ತಿಪ್ರದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

Manava-Bandhutva-vedike--02

ಬೆಂಗಳೂರು, ಜೂ.19- ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಪಾಲನೆ ಮಾಡಬೇಕು ಎಂದು ಬೆಂಬಲಿಗರು ಆಗ್ರಹಿಸಿದರು.  ಮಾನವ ಬಂಧುತ್ವ ವೇದಿಕೆ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಮೈತ್ರಿ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಬೇಕೆಂದು ಏರ್ಪಡಿಸಲಾಗಿದ್ದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ಬಹುತೇಕ ಗಣ್ಯರು, ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದನ್ನು ವಿರೋಧಿಸಿದರು.

Manava-Bandhutva-vedike--03

ಪಕ್ಷ ಸಂಘಟನೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಉತ್ತಮ ಕೆಲಸ ಮಾಡಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಜಾರಕಿಹೊಳಿ ಅವರು ಕಾರಣರಾಗಿದ್ದರು. ಆರಂಭದಲ್ಲಿ ಸಚಿವರಾಗಿದ್ದ ಅವರನ್ನು ಅನಂತರ ಸಂಪುಟ ವಿಸ್ತರಣೆಯಲ್ಲಿ ಕೈ ಬಿಡಲಾಯಿತು. ಅಂದಿನಿಂದ ಇಂದಿನವರೆಗೂ ಉದ್ದೇಶ ಪೂರ್ವಕವಾಗಿಯೇ ಅವರನ್ನು ಸಂಪುಟದಿಂದ ದೂರವಿಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೈಚಾರಿಕ ಹಿನ್ನೆಲೆಯುಳ್ಳ ಸತೀಶ್ ಜಾರಕಿಹೊಳಿ ಅವರು ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಜಾತಿ ಭೇದವಿಲ್ಲದೆ ನಾಯಕತ್ವವನ್ನು ರೂಢಿಸಿಕೊಂಡಿದ್ದಾರೆ. ರಾಜಕೀಯ ದ್ವೇಷಕ್ಕೆ ಅವರನ್ನು ಮೂಲೆಗುಂಪು ಮಾಡುವುದು ಸರಿಯಲ್ಲ ಎಂಬ ಅಸಮಾಧಾನ ಕೇಳಿ ಬಂತು. ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಸಾವಿರಾರು ಮಂದಿ ಬೆಂಬಲಿಗರು ಫ್ರೀಡಂ ಪಾರ್ಕ್‍ನಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಭಾಗವಹಿಸಿದ್ದರು.

Manava-Bandhutva-vedike--01

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin