”ಆಪರೇಷನ್ ಕಮಲಕ್ಕೆ ಪ್ರತಿಯಾಗಿ ನಾವು ‘ಉಲ್ಟಾ ಆಪರೇಷನ್’ ಮಾಡ್ತೀವಿ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮೇ 25- ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.  ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಚುನಾವಣೆಗೆ ಹಿನ್ನಡೆಯಾಗಿರುವ ಸಾಧ್ಯತೆ ಇದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬಂದಿರುವುದರಿಂದ ಅವರು ಆಪರೇಷನ್ ಕಮಲ ಶುರು ಮಾಡುತ್ತಾರೆ. ಅದಕ್ಕೆ ನಾವು ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ. ನಾವು ಉಲ್ಟಾ ಆಪರೇಷನ್ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಾರಕಿಹೊಳಿ ನರೇಂದ್ರ ಮೋದಿ ಅವರ ಹೊಡೆತಕ್ಕೆ ಆ ಅಧ್ಯಾಯ ಮುಗಿದುಹೋಗಿದೆ. ಇನ್ನೇನಿದ್ದರೂ ನಾವು ಹೈಕಮಾಂಡ್ ಹೇಳಿದಂತೆ ಲೆಫ್ಟ್‍ರೈಟ್ ಮಾಡಿಕೊಂಡಿರಬೇಕು ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ಅವರು ಬಿಡುಗಡೆಯಾಗದ ಕರಿಮಾಯೆ ಚಿತ್ರ ಇದ್ದ ಹಾಗೆ. ಅವರ ಚಿತ್ರ ಯಾವುದೂ ಬಿಡುಗಡೆಯಾಗಿಲ್ಲ. ಆಗುವುದೂ ಇಲ್ಲ ಎಂದು ತಿಳಿಸಿದರು.  ಇದೇ 29ಕ್ಕೆ ಆಪರೇಷನ್ ಕಮಲ ಶುರು ಮಾಡುತ್ತಾರೆ. ಇದಕ್ಕೆ ಬ್ರೇಕ್ ಹಾಕಲು ನಾವು ಕೂಡ ಸಿದ್ಧರಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮೈತ್ರಿ ನಾಯಕರ ನಡುವೆ ನಡೆದ ಆರೋಪ-ಪ್ರತ್ಯಾರೋಪಗಳಿಂದ ತಪ್ಪುಗಳಾಗಿವೆ ಎಂದು ಒಪ್ಪಿಕೊಂಡಿದ್ದಾರೆ. ಇನ್ನು ನಾಲ್ಕು ವರ್ಷ ಇದೆ. ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin