ರಿಜ್ವಾನ್ ಅರ್ಷದ್‍ರಿಂದ ತೆರವಾಗಿರುವ ಎಂಎಲ್‍ಸಿ ಸ್ಥಾನಕ್ಕೆ ಡಿಸಿಎಂ ಸವದಿ ಆಯ್ಕೆ ಖಚಿತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.10- ಶಿವಾಜಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ರಿಜ್ವಾನ್ ಅರ್ಷದ್‍ರಿಂದ ತೆರವಾಗಿರುವ ಎಂಎಲ್‍ಸಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ ಸೋತಿದ್ದರು, ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಗಸ್ಟ್ 20ರಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಪರಿಷತ್ ಅಥವಾ ವಿಧಾನಸಭೆಯಿಂದ ಜನಪ್ರತಿನಿಧಿಗಳು ಆಯ್ಕೆಯಾಗಲೇ ಬೇಕೆಂಬ ಕಾನೂನು ಇರುವುದರಿಂದ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ. ಸರ್ಕಾರ 117 ಶಾಸಕರಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ 100 ಶಾಸಕರಿದ್ದಾರೆ. ಹೀಗಾಗಿ ವಿರೋಧ ಪಕ್ಷಗಳು ಯಾವುದೇ ಸವಾಲು ಹಾಕಲು ಸಾಧ್ಯವಿಲ್ಲ.

Facebook Comments