ಪದವೀಧರರಿಗೆ ಎಸ್‌ಬಿಐನಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(ಎಸ್‌ಬಿಐ) 477 ವಿವಿಧ ಹುದ್ದೆಗಳಿಗೆ(ಡೆವಲಪರ್, ಸಿಸ್ಟಮ್ / ಸರ್ವರ್ ನಿರ್ವಾಹಕರು) ನೇಮಕಾತಿಗಾಗಿ ಎಸ್ ಬಿ ಐ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 06.09.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 05.09.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(ಎಸ್‌ಬಿಐ) 477 ವಿವಿಧ ಹುದ್ದೆಗಳಿಗೆ (ಡೆವಲಪರ್, ಸಿಸ್ಟಮ್ / ಸರ್ವರ್ ನಿರ್ವಾಹಕರು) ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಪದವೀಧರ, ಬಿಇ / ಬಿಟೆಕ್, ಎಂಬಿಎ, ಸಿಎ, ಸಿಎಫ್‌ಎ, ಪಿಜಿಡಿಎಂ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.
ವಯಸ್ಸಿನ ಮಿತಿ:  23 ರಿಂದ 35 ವರ್ಷಗಳು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ:  ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರುತ್ತದೆ.
ಅಧಿಸೂಚನೆ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ