ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸುಪ್ರೀಂ ಸಲ್ಲಿಸಿದ ಅರ್ಜಿ ವಿಚಾರಣೆ ನಾಳೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.17 (ಪಿಟಿಐ)- ದೇಶದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತು ನಾಳೆ (ಜೂ.18) ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡ ರಜೆ ಕಾಲದ ಪೀಠವು ಅರ್ಜಿದಾರರ ಪರ ಹಿರಿಯ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಸಲ್ಲಿಸಿರುವ ಮನವಿ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ರೋಗಿಗಳ ಕುಟುಂಬದವರು ನಡೆಸಿದ ಹಲ್ಲೆಯಿಂದ ಕಿರಿಯ ವೈದ್ಯರೊಬ್ಬರು ಮೃತಪಟ್ಟಿದ್ದು, ವೈದ್ಯರಿಗೆ ರಕ್ಷಣೆ ಕೋರಿದ ಪಶ್ವಿಮ ಬಂಗಾಳದಲ್ಲಿ ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಕಳದ ಶುಕ್ರವಾರ ಈ ಅರ್ಜಿ ಸಲ್ಲಿಸಲಾಗಿತ್ತು.

ವೈದ್ಯರ ಸುರಕ್ಷತೆ ಮತ್ತು ಭದ್ರತೆಗಾಗಿ ದೇಶಾದ್ಯಂತ ಇರುವ ಎಲ್ಲ ರಾಜ್ಯ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಗಳಿಗೆ ಸರ್ಕಾರದಿಂದ ನೇಮಕಗೊಂಡ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಕೇಂದ್ರ ಗೃಹ ಮತ್ತು ಆರೋಗ್ಯ ಸಚಿವರಿಗೆ ಸೂಚನೆ ನೀಡಬೇಕೆಂದು ಸಹ ಅರ್ಜಿದಾರರು ಮನವಿಯಲ್ಲಿ ಕೋರಿದ್ದಾರೆ.

Facebook Comments