ಹಿಂದುಳಿದ ವರ್ಗಗಳಿಗೆ ಮೀಸಲಾತಿ ಮುಂಬಡ್ತಿ ಹಕ್ಕು ಮೊಟಕು : ಟೌನ್‍ಹಾಲ್ ಬಳಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.17-ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಮುಂಬಡ್ತಿ ಹಕ್ಕನ್ನು ಮೊಟಕುಗೊಳಿಸಿರುವುದರ ವಿರುದ್ದ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್, ಟೌನ್‍ಹಾಲ್ ಎದುರು ಇಂದು ಪ್ರತಿಭಟನೆ ನಡೆಸಿತು.

ನಗರ ಜಿಲ್ಲಾ ಕಾಂಗ್ರೆಸ್ ಘಟಕಗಳು, ಕೆಪಿಸಿಸಿಯ ಪರಿಶಿಷ್ಟ ಜಾತಿ/ ಪಂಗಡದ ವಿಭಾಗ, ಹಿಂದುಳಿದ ವರ್ಗಗಳ ವಿಭಾಗ ಪ್ರತಿಭಟನೆಯನ್ನು ಆಯೋಜಿಸಿತ್ತು. ಕೇಂದ್ರ ಸರ್ಕಾರ ಕೂಡಲೇ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕು.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತಳ ಸಮುದಾಯಗಳ ಹಕ್ಕುಗಳು ಕುಸಿಯುತ್ತಿವೆ. ಸಂವಿಧಾನದ ಆಶಯಗಳು ಬುಡಮೇಲಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನದ ವಿರೋಧಿಯಾಗಿ ನಡೆಯುತ್ತಿರುವ ಸರ್ಕಾರಗಳು ಸಂವಿಧಾನದ ಆಶಯಗಳು ಮೊಟಕುಗೊಂಡಾಗ ಧ್ವನಿಯೆತ್ತದೆ ಮೌನವಾಗಿವೆ.

ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಎದುರಾದರೆ ಪ್ರಜಾಪ್ರಭುತ್ವದ ವ್ಯವಸ್ಥೆಗೂ ಧಕ್ಕೆ ಉಂಟಾಗಲಿದೆ ಎಂದು ಎಚ್ಚರಿಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Facebook Comments

Sri Raghav

Admin