ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳಕ್ಕೆ ಹಕ್ಕೊತ್ತಾಯ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.19-ಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಹಕ್ಕೊತ್ತಾಯಿಸಿ ನಾಳೆ ಬೆಳಗ್ಗೆ 11 ಗಂಟೆಗೆ ಗಾಂಧಿಭವನದಲ್ಲಿ ಪೂರ್ವ ಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು  ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಪರಿಶಿಷ್ಠ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗಕ್ಕೆ ಡಿಸೆಂಬರ್ 10ರೊಳಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕಾಗಿದೆ. ಈ ಬಗ್ಗೆ ಸಮುದಾಯದ ಪ್ರತಿನಿಧಿಗಳು ಹಾಗೂ ತಜ್ಞರೊಂದಿಗೆ ಚರ್ಚಿಸುವ ಸಲುವಾಗಿ ಈ ಸಭೆ ಕರೆಯಲಾಗಿದೆ.

ಇದರಲ್ಲಿ ದಲಿತ ಮುಖಂಡರು ನಿವೃತ್ತ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ 200 ರೂ. ಕೋಟಿ ವೆಚ್ಚದಲ್ಲಿ ಕಾಂತರಾಜು ವರದಿಯನ್ನು ಸಿದ್ಧಪಡಿಸಿ ರಾಜ್ಯದಲ್ಲಿರುವ ಪ್ರತಿಯೊಂದು ಹಳ್ಳಿ, ಹೋಬಳಿ ,ತಾಲೂಕು ಮಟ್ಟದಲ್ಲಿ ಜಾತಿ ಗಣತಿ ಮಾಡಿಸಲಾಗಿದ್ದು ಈ ಕಾಂತರಾಜು ವರದಿಯನ್ನು ಈಗಿರುವ ರಾಜ್ಯ ಸರ್ಕಾರ ಜಾರಿ ತರುವಂತೆ ಆಗ್ರಹಿಸಿದ್ದಾರೆ .

1931 ರ ಮೊದಲ ಜನಗಣತಿ ಅಧಾರದ ಮೇಲೆ ಇಂದಿಗೂ ಕೂಡ ಮೀಸಲಾತಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಜನರ ಸಂಖ್ಯೆ ಶೇ.24 ರಷ್ಟು ಇದ್ದು ಕಾಂತರಾಜು ವರದಿಯನ್ನು ಜಾರಿಗೊಳಿಸಿದ್ದಾರೆ. ಕಡು ಬಡವರಿಗೂ ಸಹ ಮೀಸಲಾತಿ ದೊರೆಯಲಿದೆ ಎಂದು ತಿಳಿಸಿದರು. ನಾಳೆ ಸಭೆ ನಡೆಸಿ ವರದಿಯನ್ನು ಲಿಖಿತ ರೂಪದಲ್ಲಿ ಏಕ ಸದಸ್ಯ ಆಯೋಗಕ್ಕೆ ಸವಿವರವಾದ ಮನವಿ ಸಲ್ಲಿಸಲಾಗುವುದಾಗಿ ತಿಳಿಸಿದರು.

Facebook Comments