ವಿಪ್ರದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.10- ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಮೂರು ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿಪ್ರ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಪ್ರಥಮ ಬಾರಿಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಕ್ರಮವಾಗಿ 15,000 ರೂ, 10,000 ರೂ ಹಾಗೂ 5,000 ರೂ.ಗಳ ನಗದು ಬಹುಮಾನವನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈಗಾಗಲೇ ಬ್ರಾಹ್ಮಣ ಸಮುದಾಯಕ್ಕೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ತಾನು ಕಟಿಬದ್ಧ ಎಂಬುದನ್ನು ನಿರೂಪಿಸಿದೆ.

ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿ ಮಂಡಳಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಕಳೆದ ವಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಆಡಳಿತ ಮಂಡಳಿಯ ಮೊದಲ ಸಭೆ ನಡೆದು ಆ ಸಭೆಯಲ್ಲಿ ಅನೇಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ, ಅನೇಕ ಯೋಜನೆಗಳ ಬಗ್ಗೆ ಚರ್ಚಿಸಿ , ಈ ಯೋಜನೆಗಳನ್ನು ಆರ್ಥಿವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯಕ್ಕೆ ತಲುಪಿಸುವ ಕಾರ್ಯ ತಂತ್ರವನ್ನೂ ಚರ್ಚಿಸಿದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಂಡಳಿಯ ನಿರ್ದೇಶಕ ರಾದ ಹೆಚ್.ಸಿ. ಪುರುಷೋತ್ತಮ, ಡಿ.ವಿ.ರಾಜೇಂದ್ರ ಪ್ರಸಾದ್, ಮಾಜಿ ತಾಲ್ಲೂಕ್ ಪಂಚಾಯತಿ ಅಧ್ಯಕ್ಷ ರಾದ ಅಶ್ವಥ್ ನಾರಾಯಣ ಕುಮಾರ್, ಎಲ್ಲಾ ತಾಲ್ಲೂಕಿನ ಬ್ರಾಹ್ಮಣ ಸಂಘಗಳ ಪ್ರಮುಖರು ಭಾಗವಹಿಸಿದ್ದರು.

Facebook Comments

Sri Raghav

Admin