ಶಾಲಾ -ಕಾಲೇಜು ಆರಂಭದ ಬಗ್ಗೆ ನಾಳೆ ನಿರ್ಧಾರ..

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.22- ಕೋವಿಡ್- 19 ಹಿನ್ನೆಲೆಯಲ್ಲಿ ಕಳೆದ ಎಂಟು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ನಾಳೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆಯ ಸಚಿವರು ಮತ್ತು ಅಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದು , ಶಾಲಾ ಕಾಲೇಜುಗಳನ್ನು ಆರಂಭಿಸಬೇಕೇ ಅಥವಾ ಇನ್ನು ಕೆಲ ದಿನಗಳ ಮಟ್ಟಿಗೆ ಯಥಾ ಸ್ಥಿತಿಯಲ್ಲಿ ಮುಂದುವರೆಸಬೇಕೇ ಎಂಬುದರ ಕುರಿತಂತೆ ಸರ್ಕಾರ ತೀರ್ಮಾನವನ್ನು ಪ್ರಕಟಿಸಲಿದೆ.

ಕೆಲ ಪೋಷಕರು ಶಾಲಾ ಕಾಲೇಜುಗಳನ್ನು ಆರಂಭಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಕೆಲವರು ಒತ್ತಡ ಹಾಕಿದ್ದರೆ , ಇನ್ನು ಕೆಲವರು ಬೇಡ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಶಿಕ್ಷಣ ತಜ್ಞರು ಪಾಳಿ ಸರದಿಯಲ್ಲಿ ಶಾಲೆಗಳನ್ನು ಆರಂಭಿಸಬೇಕು ಇಲ್ಲದಿದ್ದರೆ ಖಾಸಗಿ ಶಾಲಾ ಆಡಳಿತ ಮಂಡಳಿ ಪ್ರಾರಂಭಿಸಲು ತುದಿಗಾಲಲ್ಲೇ ನಿಂತಿದೆ.

Facebook Comments