ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--02ಮಡಿಕೇರಿ,ಡಿ.29-ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತನಕ್ಕೀಡಾದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಸುಕಿನ ಜಾವ 2.30ರ ಸುಮಾರಿಗೆ ನಡೆದಿದೆ.

ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಬಸವರಾಜು ಮೃತ ದುರ್ದೈವಿ.ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಖಾಸಗಿ ಬಸ್‍ನಲ್ಲಿ ಮಡಿಕೇರಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಮಡಿಕೇರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪಾರಾದ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪ ರಾಮ ಮಂದಿರದಲ್ಲಿ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಗಾಯಗೊಂಡಿರುವ ಬಸ್ ಚಾಲಕ ಮತ್ತು ಅಡುಗೆ ಸಿಬ್ಬಂದಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಕೊಡಗು ಎಸ್‍ಪಿ ಸುಮನ್ ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ