ಪಂಜಾಬ್‍ನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಚಂಡಿಘರ್, ಆ.2- ಕೋವಿಡ್‍ನ ಮೂರನೇ ಅಲೆಯ ಆತಂಕದ ನಡುವೆಯು ಪಂಜಾಬ್ ಸರ್ಕಾರ ಇಂದಿನಿಂದ ಎಲ್ಲಾ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಿದೆ.ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ತರಗತಿಗಳನ್ನು ರದ್ದುಗೊಳಿಸಲಾಗಿತ್ತು. ಶಾಲಾ ಕಾಲೇಜುಗಳು ಮುಚ್ಚಿದ್ದವು. ಮೊದಲ ಅಲೆಯ ವೇಳೆ ಮುಚ್ಚಲಾಗಿದ್ದ ಶಾಲೆಗಳನ್ನು ಹತ್ತು ತಿಂಗಳ ಬಳಿಕ ಇದೇ ವರ್ಷ ಫೆಬ್ರವರಿಯಲ್ಲಿ ತೆರೆಯಲಾಗಿತ್ತು.

ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಮಾರ್ಚ್‍ನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಪ್ರಸ್ತುತ ಸೋಂಕಿನ ಪ್ರಕರಣಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜುಲೈ 26ರಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು.

ಇಂದಿನಿಂದ ಎಲ್ಲಾ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ರಾಜ್ಯದ ಬಹಳಷ್ಟು ಕಡೆ ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಬಂದಿದ್ದು ಕಂಡು ಬಂದಿತ್ತು.

Facebook Comments