SDM ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ,ನ.25- ಧಾರವಾಡ ಎಸ್‍ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡಬಂದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಕಾಲೇಜಿನಲ್ಲಿ ಗೆಟ್ ಟು ಗೆದರ್ ಈವೆಂಟ್‍ನಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು, 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಆತಂಕ ಕಂಡುಬಂದಿದ್ದು, ಸೋಂಕಿತ 66 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಸಂಪರ್ಕ ಹೊಂದಿದ ವಿದ್ಯಾರ್ಥಿಗಳನ್ನು ಕ್ವಾರಂಟೈನ ಮಾಡಲಾಗಿದೆ.

ಎಲ್ಲಾ ವಿದ್ಯಾರ್ಥಿಗಳ ಗಂಟಲು ದ್ರವವನ್ನು ತಪಾಸಣೆಗೆ ಪಡೆಯಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾಕಾರಿ ನಿತೀಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

Facebook Comments